ADVERTISEMENT

ಕಾಬೂಲ್: ಬಾಂಬ್ ಸ್ಫೋಟಕ್ಕೆ ಮೂವರು ಬಲಿ

​ಪ್ರಜಾವಾಣಿ ವಾರ್ತೆ
Published 9 ಮೇ 2018, 9:53 IST
Last Updated 9 ಮೇ 2018, 9:53 IST
ಕಾಬೂಲ್: ಬಾಂಬ್ ಸ್ಫೋಟಕ್ಕೆ ಮೂವರು ಬಲಿ
ಕಾಬೂಲ್: ಬಾಂಬ್ ಸ್ಫೋಟಕ್ಕೆ ಮೂವರು ಬಲಿ   

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ. ತದನಂತರ ಗುಂಡಿನ ದಾಳಿ ಕೂಡ ನಡೆದಿದೆ ಎಂದು ಆಂತರಿಕ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಸ್ಫೋಟವು ನಗರದ ಕೇಂದ್ರ ಭಾಗದಲ್ಲಿರುವ ಪೊಲೀಸ್ ಠಾಣೆಯ ಬಳಿ ನಡೆದಿದೆ. ಸಾವು ನೋವು ಹೆಚ್ಚಾಗುವ ಸಾಧ್ಯತೆ ಇದೆ.

ಪೊಲೀಸ್ ಠಾಣೆಯ ಮುಂಭಾಗದಲ್ಲಿ ಆತ್ಮಾಹುತಿ ಬಾಂಬ್ ದಾಳಿಕೋರ ಸ್ವತಃ ಸ್ಫೋಟಿಸಿಕೊಂಡು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವಕ್ತಾರ ಹಶ್ಮತ್ ಸ್ಟಾನೆಕ್ಜಾಯ್ ಹೇಳಿದ್ದಾರೆ.

ADVERTISEMENT

ಕಳೆದ ವಾರ ಸಂಭವಿಸಿದ ಅವಳಿ ಆತ್ಮಾಹುತಿ ದಾಳಿಯಲ್ಲಿ 9 ಮಂದಿ ಪತ್ರಕರ್ತರು ಸೇರಿದಂತೆ 26 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.