ADVERTISEMENT

ಚಿಲಿಯಲ್ಲಿ 6.3ರಷ್ಟು ತೀವ್ರತೆಯ ಭೂಕಂಪ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2016, 11:11 IST
Last Updated 10 ಫೆಬ್ರುವರಿ 2016, 11:11 IST
ಚಿಲಿಯಲ್ಲಿ 6.3ರಷ್ಟು ತೀವ್ರತೆಯ ಭೂಕಂಪ
ಚಿಲಿಯಲ್ಲಿ 6.3ರಷ್ಟು ತೀವ್ರತೆಯ ಭೂಕಂಪ   

ಸ್ಯಾಂಟಿಯಾಗೊ (ಚಿಲಿ) (ಪಿಟಿಐ): ಚಿಲಿಯ ಕೇಂದ್ರ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3ರಷ್ಟು ದಾಖಲಾಗಿದೆ. ಆದರೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.

ಕಂಪನದಿಂದಾಗಿ ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ಮನೆಗಳ  ಕಪಾಟುಗಳಲ್ಲಿ ವಸ್ತುಗಳೆಲ್ಲ ನೆಲಕ್ಕುರುಳಿವೆ. ಕೆಲವು ನಿವಾಸಿಗಳನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಕಂಪನದ ಕೇಂದ್ರ ಬಿಂದು ಸ್ಯಾಂಟಿಯಾಗೊ ಕರಾವಳಿ ತೀರದ 35 ಕಿ. ಮೀಟರ್‌ ಆಳದಲ್ಲಿ ದಾಖಲಾಗಿದೆ.  ಇಲ್ಲಿನ ಜನರಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದ್ದು , ತುರ್ತುಪರಿಸ್ಥಿತಿ ಘೋಷಿಸಲಾಗಿದೆ ಎಂದು ಚಿಲಿ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.