ADVERTISEMENT

ಚೀನಾ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ, ಪವಾಡ ಸದೃಶ ರೀತಿಯಲ್ಲಿ ಪಾರಾದ ವ್ಯಕ್ತಿ

ವ್ಯಕ್ತಿ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿ

ಏಜೆನ್ಸೀಸ್
Published 16 ಡಿಸೆಂಬರ್ 2017, 13:44 IST
Last Updated 16 ಡಿಸೆಂಬರ್ 2017, 13:44 IST
ಚೀನಾ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ, ಪವಾಡ ಸದೃಶ ರೀತಿಯಲ್ಲಿ ಪಾರಾದ ವ್ಯಕ್ತಿ
ಚೀನಾ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ, ಪವಾಡ ಸದೃಶ ರೀತಿಯಲ್ಲಿ ಪಾರಾದ ವ್ಯಕ್ತಿ   

ಬೀಜಿಂಗ್: ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಪವಾಡ ಸದೃಶ ರೀತಿಯಲ್ಲಿ ಸಾವಿನ ದವಡೆಯಿಂದ ಪಾರಾದ ಘಟನೆ ಇಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆ ವ್ಯಕ್ತಿ ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

23 ಮಹಡಿಯ ಕಟ್ಟಡದಲ್ಲಿ ಡಿ.13ರಂದು ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಇದರಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಪಾರಾಗಲು ಯತ್ನಿಸಿದ್ದಾನೆ. ಆಗ ಅವರ ಮೇಲೆ ಬೆಂಕಿಯ ಉಂಡೆಗಳು ಬೀಳಲಾರಂಭಿಸಿದವು.

ADVERTISEMENT

ಇದರಿಂದ ಧೃತಿಗೆಡದ ವ್ಯಕ್ತಿಯು ಬೆಂಕಿ ಕಾಣಿಸಿಕೊಂಡ ಮಹಡಿಯ ಕೆಳಗಿನ ಮಹಡಿಯ ಗಾಜಿನ ಕಿಟಕಿಯನ್ನು ಕಾಲಿನಿಂದ ಒದ್ದು ಒಡೆಯಲು ಪ್ರಯತ್ನಿಸಿದ್ದಾರೆ. ಆದರೆ ಒಡೆಯಲು ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ಬಿದ್ದ ಬೆಂಕಿಯ ಉಂಡೆಗಳಿಂದ ಸಣ್ಣ ಪುಟ್ಟ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಮಹಡಿಯ ಗಾಜಿನ ಕಿಟಕಿಯನ್ನು ಒಡೆದು ವ್ಯಕ್ತಿಯನ್ನು ಒಳಗೆಳೆದುಕೊಂಡು ರಕ್ಷಣೆ ಮಾಡಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಹೋರಾಡುವ ವೇಳೆ ಗಾಯಗಳಾಗಿವೆ.  ಆದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಯಾಹೂ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.