ವಿಶ್ವಸಂಸ್ಥೆ(ಪಿಟಿಐ): ಲೈಂಗಿಕ ಅಲ್ಪಸಂಖ್ಯಾತರನ್ನು ಮೂರನೇ ಲಿಂಗದವರು ಎಂದು ಗುರುತಿಸಿ ಭಾರತದ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ‘ಐತಿಹಾಸಿಕ’ವಾದುದು ಎಂದು ವಿಶ್ವಸಂಸ್ಥೆ ಶ್ಲಾಘಿಸಿದೆ. ಅಲ್ಲದೇ, ಈ ತೀರ್ಪಿನಿಂದ ಲೈಂಗಿಕ ಅಲ್ಪಸಂಖ್ಯಾತರು ಉದ್ಯೋಗ ಮತ್ತು ಸಾರ್ವಜನಿಕ ಸೇವಾವಲಯವನ್ನು ಪ್ರವೇಶಿಸಲು ಸಹಾಯಕಾರಿಯಾಗಿದೆ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ನ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಅವರ ವಕ್ತಾರರಾದ ಸ್ಟಿಫಾನ್ ಡುಜಾರಿಕ್, ‘ಭಾರತದ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಎತ್ತಿಹಿಡಿಯುವ ಈ ತೀರ್ಪು ಐತಿಹಾಸಿಕವಾದುದು ಇದನ್ನು ನಾವು ಸ್ವಾಗತಿಸುತ್ತೇವೆ’ ಎಂದು ಹೇಳಿದ್ದಾರೆ.
‘ಲೈಂಗಿಕ ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಈ ತೀರ್ಪು ಸಹಾಯಕಾರಿಯಾಗಲಿದೆ’ ಎಂದು ಡುಜಾರಿಕ್ ಹೇಳಿದ್ದಾರೆ.
ಲಂಡನ್ ವರದಿ: ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಅಂಗೀಕರಿಸಿರುವ ಭಾರತದ ಸುಪ್ರೀಂಕೋರ್ಟ್ಗೆ ಧನ್ಯವಾದ. ಇದರಿಂದ ಲಕ್ಷಾಂತರ ಜನರ ಬದುಕಿನಲ್ಲಿ ಬದಲಾವಣೆ ಆಗಲಿದೆ ಎಂದು ಮಾನವಹಕ್ಕುಗಳ ಹೋರಾಟ ಸಂಸ್ಥೆ ಅಮ್ನೆಸ್ಟಿ ಇಂಟರ್ನ್ಯಾಷನಲ್ ಹೇಳಿದೆ.
ಹಲವಾರು ವರ್ಷಗಳಿಂದ ದಮನಕ್ಕೊಳಗಾದ ಜನರ ಬದುಕಿನಲ್ಲಿ ಬದಲಾವಣೆ ತರಲು ಈ ತೀರ್ಪು ನೆರವಾಗುತ್ತದೆ ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ನ ಭಾರತಕ್ಕೆ ಸಂಬಂಧಿಸಿದ ಯೋಜನಾ ನಿರ್ದೇಶಕ ಶಶಿಕುಮಾರ್ ವೆಲಾತ್ ಶ್ಲಾಘಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.