ADVERTISEMENT

ನೈಜೀರಿಯಾ: ಆತ್ಮಹತ್ಯಾ ದಾಳಿಗೆ 10 ಮಂದಿ ಬಲಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2015, 20:19 IST
Last Updated 4 ಜುಲೈ 2015, 20:19 IST

ಲಾಗೋಸ್ (ಐಎಎನ್‌ಎಸ್): ನೈಜೀರಿಯಾದ ಬೋರ್ನೊ ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಆತ್ಮಹತ್ಯಾ ಬಾಂಬ್ ದಾಳಿಗಳಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ನೈಜೀರಿಯಾ ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಮಲಾರಿ ಪಟ್ಟಣದ ಜನನಿಬಿಡ ಪ್ರದೇಶದಲ್ಲಿ ಮಹಿಳಾ ಆತ್ಮಹತ್ಯಾ ಬಾಂಬರ್, ತಾನು ಕಟ್ಟಿಕೊಂಡಿದ್ದ ಸುಧಾ ರಿತ ಸ್ಫೋಟಕ ಸಾಧನವನ್ನು ಸಿಡಿಸಿದ್ದಾಳೆ. ಘಟನೆಯಲ್ಲಿ  ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 13 ಜನ ಗಾಯ ಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಸ್ಫೋಟ: ಇಲ್ಲಿನ ಅಲಾ ಡ್ಯಾಮ್ ರಸ್ತೆಯಲ್ಲಿ ನಡೆದ ಮತ್ತೊಂದು ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ. ಈ ದಾಳಿಯನ್ನೂ ನಡೆಸಿದ್ದೂ ಮಹಿಳೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಎರಡೂ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯಾ ಬಾಂಬರ್‌ಗಳು ಸೇರಿದಂತೆ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.