ADVERTISEMENT

ಪಾಕ್‌ನಲ್ಲಿ ಭಾರಿ ಮಳೆ: 24 ಸಾವು

ಪಿಟಿಐ
Published 23 ಆಗಸ್ಟ್ 2017, 19:30 IST
Last Updated 23 ಆಗಸ್ಟ್ 2017, 19:30 IST

ಕರಾಚಿ:  ನಗರದ ದಕ್ಷಿಣ ಭಾಗದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ 24 ಮಂದಿ ಮೃತಪಟ್ಟಿದ್ದು, ಸುಮಾರು 20 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಹಾನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕಟ್ಟಡಗಳಿಗೆ ಹಾನಿಯಾಗಿದೆ. ವಿದ್ಯುತ್‌ ಶಾಕ್‌ನಿಂದಾಗಿ ಜನರು ಮೃತಪಟ್ಟಿದ್ದಾರೆ ಎಂಬುದಾಗಿ ಸಿಂಧ್‌ ಪ್ರಾಂತ್ಯದ ಸರ್ಕಾರ ಅಧಿಕೃತವಾಗಿ ತಿಳಿಸಿದೆ.

ಬಹುತೇಕ ಪ್ರದೇಶಗಳಲ್ಲಿ ಸೋಮವಾರದಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.
ಇದರಿಂದಾಗಿ ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗಿದೆ ಎಂದು ವರದಿಯಾಗಿದೆ. ಇನ್ನೂ ಕೆಲ ದಿನ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.