ADVERTISEMENT

ಪಾಕ್‌ ಶಿಯಾ ಮಸೀದ್‌ ಸ್ಫೋಟ: 50 ಸಾವು

​ಪ್ರಜಾವಾಣಿ ವಾರ್ತೆ
Published 30 ಜನವರಿ 2015, 14:34 IST
Last Updated 30 ಜನವರಿ 2015, 14:34 IST
ಬಾಂಬ್‌ ಸ್ಫೋಟಗೊಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ   –ರಾಯಿಟರ್ಸ್‌ ಚಿತ್ರ
ಬಾಂಬ್‌ ಸ್ಫೋಟಗೊಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ –ರಾಯಿಟರ್ಸ್‌ ಚಿತ್ರ   

ಇಸ್ಲಾಮಾಬಾದ್‌ (ಐಎಎನ್‌ಎಸ್‌): ಪಾಕಿಸ್ತಾನದ ಶಿಕರ್‌ಪುರದ ದಕ್ಷಿಣ ಪ್ರಾಂತ್ಯದ ಶಿಯಾ ಮಸೀದ್‌ನಲ್ಲಿ ಶುಕ್ರವಾರ ನಡೆದ ಪ್ರಬಲ ಬಾಂಬ್‌ ಸ್ಫೋಟದಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದಾರೆ.

ಶಿಕರ್‌ಪುರದ ಲಖಿ ದರ್‌ ಪ್ರದೇಶದ ಶಿಯಾ ಸಮುದಾಯಕ್ಕೆ ಸೇರಿದ ಮಸೀದ್‌ನಲ್ಲಿ ಪ್ರಾರ್ಥನೆ ನಡೆದ ಕೆಲ ಸಮಯದಲ್ಲೇ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಇದು ಆತ್ಮಹತ್ಯಾ ದಾಳಿ ಇರಬಹುದೆಂದು ಸ್ಥಳೀಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಶಿಯಾ ಸಮುದಾಯವನ್ನು ಗುರಿಯಾಗಿಸಿಕೊಂಡು ಸುನ್ನಿಗಳು ಈ ದಾಳಿ ನಡೆಸಿದ್ದಾರೆಯೆ ಎಂಬುದು ಸ್ಪಷ್ಟವಾಗಿಲ್ಲ.

ADVERTISEMENT

ಸ್ಫೋಟದಿಂದ ಮಸೀದ್‌ನ ಛಾವಣಿ ಕುಸಿದ ಕಾರಣ ಸಾವು ನೋವು ಹೆಚ್ಚಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್‌ ಷರೀಫ್‌ ಮತ್ತು ಅಧ್ಯಕ್ಷ ಮಮ್ನೂನ್ ಹುಸೇನ್ ಅವರು ಘಟನೆಯನ್ನು ಖಂಡಿಸಿದ್ದಾರೆ. ಸ್ಫೋಟದ ಘಟನೆ ಸರ್ಕಾರದ ವೈಫಲ್ಯವನ್ನು ತೋರುತ್ತದೆ ಎಂದಿರುವ ಮಸೀದ್‌ ವಹ್ದತ್‌ ಉಲ್‌ ಮುಸ್ಲಿಮೀನ್‌ (ಎಂಡಬ್ಲ್ಯುಎಂ) ಮೂರು ದಿನಗಳ ಶೋಕಾಚರಣೆ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.