ADVERTISEMENT

ಪ್ರಧಾನಿ ಹುದ್ದೆಗೆ ತೆರೆಸಾ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2016, 19:30 IST
Last Updated 1 ಜುಲೈ 2016, 19:30 IST

ಲಂಡನ್‌ (ಪಿಟಿಐ): ಬ್ರಿಟನ್‌ ಪ್ರಧಾನಿ ಡೇವಿಡ್‌ ಕ್ಯಾಮರೂನ್‌ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದ್ದು, ಬ್ರಿಟನ್‌ನ ಪ್ರಭಾವಿ ಗೃಹ ಸಚಿವೆ ತೆರೆಸಾ ಮೇ ಅವರು ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಹುದ್ದೆಗೆ ಮುಂಚೂಣಿಯಲ್ಲಿದ್ದ ಬೋರಿಸ್ ಜಾನ್ಸನ್‌ ಅವರು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಾಗಿ ಘೋಷಿಸಿ, ಅಚ್ಚರಿ ಮೂಡಿಸಿದ್ದಾರೆ. ಇದರಿಂದಾಗಿ ಮೇ ಅವರ ಹಾದಿ ಸುಗಮವಾಗಿದೆ. ಬ್ರೆಕ್ಸಿಟ್‌  ಬಳಿಕ ಒಡಕು ಉಂಟಾಗಿರುವ ಕನ್ಸರ್ವೇಟಿವ್ ಪಕ್ಷದಲ್ಲಿ ಮೇ ಅವರು ನೆಚ್ಚಿನ ಅಭ್ಯರ್ಥಿಯಾಗಿದ್ದಾರೆ.
ಬ್ರೆಕ್ಸಿಟ್‌ ಪ್ರಕ್ರಿಯೆಗೆ ಚಾಲನೆ ನೀಡುವುದು ವಿಳಂಬವಾಗಲಿದೆ ಎಂದು ಪ್ರಧಾನಿ ಹುದ್ದೆಯ ಆಕಾಂಕ್ಷಿಗಳು ಸೂಚನೆ ನೀಡಿದ್ದಾರೆ. ಆದರೆ ಫ್ರಾನ್ಸ್‌ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್‌ ಅವರು ಬ್ರೆಕ್ಸಿಟ್‌ ಆದೇಶವನ್ನು ರದ್ದುಗೊಳಿಸಲು ಅಥವಾ ವಿಳಂಬ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.