ADVERTISEMENT

ಫಿನ್ಲೆಂಡ್‌: ಚೂರಿ ಇರಿತ ಸೃಷ್ಟಿಸಿದ ಆತಂಕ

ಪಿಟಿಐ
Published 18 ಆಗಸ್ಟ್ 2017, 19:30 IST
Last Updated 18 ಆಗಸ್ಟ್ 2017, 19:30 IST

ಹೆಲ್ಸೆಂಕಿ (ಎಎಫ್‌ಪಿ): ಫಿನ್ಲೆಂಡ್‌ನ ಟರ್ಕು ನಗರದಲ್ಲಿ ವ್ಯಕ್ತಿಯೊಬ್ಬ ಸುಮಾರು ಎಂಟು ಜನರಿಗೆ ಚೂರಿಯಿಂದ ಇರಿದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಆರೋಪಿಯ ಕಾಲಿಗೆ ಪೊಲೀಸರು ಗುಂಡಿಕ್ಕಿ ಬಂಧಿಸಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಜನದಟ್ಟಣೆಯ ಪ್ರದೇಶದಲ್ಲಿ ಹಲವರು ಚೂರಿ ಇರಿತದಿಂದ ಕುಸಿದುಬಿದ್ದುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ದುಷ್ಕೃತ್ಯದ ಹಿಂದೆ ಇರಬಹುದಾದ ಇತರ ವ್ಯಕ್ತಿಗಳ ಬಗ್ಗೆಯೂ ಪೊಲೀಸರು ಎಚ್ಚರ ವಹಿಸಿದ್ದಾರೆ.

2012ರಲ್ಲಿ ಆಗಿನ ಪ್ರಧಾನಿ ಜರ್ಕಿ ಕೆಟೈನೆನ್‌ ಅವರು ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಚೂರಿ ಇರಿತದಿಂದ ಸ್ವಲ್ಪದರಲ್ಲಿ ಪಾರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.