ADVERTISEMENT

ಬ್ರಿಟನ್‌ ಸಂಸತ್‌ ಚೌಕದಲ್ಲಿ ಮಹಾತ್ಮ ಗಾಂಧೀಜಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2015, 13:38 IST
Last Updated 14 ಮಾರ್ಚ್ 2015, 13:38 IST
ಬ್ರಿಟನ್‌ ಸಂಸತ್‌ ಚೌಕದಲ್ಲಿ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣಗೊಳಿಸಿದ ಬಳಿಕ ಬ್ರಿಟನ್‌ ಪ್ರಧಾನಿ ಡೇವಿಡ್‌ ಕ್ಯಾಮರಾನ್‌  ಅವರು ಪುಷ್ಪನಮನ ಸಲ್ಲಿಸಿದರು. ಬಾಲಿವುಡ್‌ನ ಹಿರಿಯ ನಟ ಅಮಿತಾಬ್‌ ಬಚ್ಚನ್‌, ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಮತ್ತು ಗಾಂಧೀಜಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು ಇದ್ದಾರೆ     –ಎಎಫ್‌ಪಿ ಚಿತ್ರ

ಲಂಡನ್‌ (ಪಿಟಿಐ): ಬ್ರಿಟನ್‌ ಸಂಸತ್‌ ಚೌಕದಲ್ಲಿ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣಗೊಳಿಸಲಾಯಿತು.

ಬ್ರಿಟನ್‌ನ ಮಾಜಿ ಪ್ರಧಾನಿ ವಿನ್‌ಸ್ಟನ್‌ ಚರ್ಚಿಲ್‌ ಮತ್ತು ವರ್ಣಭೇದ ನೀತಿಯ ವಿರುದ್ಧದ ಹೋರಾಟಗಾರ ನೆಲ್ಸನ್‌ ಮಂಡೇಲಾ ಅವರ ಪ್ರತಿಮೆಗಳ ಜತೆಗೆ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯು ಸಂಸತ್‌ ಚೌಕದಲ್ಲಿ ಸ್ಥಾಪನೆಗೊಂಡಿದೆ.

ಒಂಬತ್ತು ಅಡಿ ಎತ್ತರದ ಗಾಂಧೀಜಿ ಪ್ರತಿಮೆಯನ್ನು ಬ್ರಿಟನ್‌ ಪ್ರಧಾನಿ ಡೇವಿಡ್‌ ಕ್ಯಾಮರಾನ್‌ ಅನಾವರಣಗೊಳಿಸಿದರು.  ಗಾಂಧೀಜಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ, ಬಾಲಿವುಡ್‌ನ ಹಿರಿಯ ನಟ ಅಮಿತಾಬ್‌ ಬಚ್ಚನ್‌ ಮತ್ತು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ADVERTISEMENT

‘ರಘುಪತಿ ರಾಘವ ರಾಜಾರಾಮ್‌, ಪತಿತ ಪಾವನ ಸೀತಾರಾಮ್‌’ ಭಜನೆಯೊಂದಿಗೆ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.