ADVERTISEMENT

ಭೂಕುಸಿತ: 200 ಜನರು ಸಜೀವ ಸಮಾಧಿ ಸಂಭವ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2014, 19:30 IST
Last Updated 30 ಅಕ್ಟೋಬರ್ 2014, 19:30 IST

ಕೊಲಂಬೊ (ಪಿಟಿಐ): ಭಾರತೀಯ ಮೂಲದ ತೋಟಗಾರಿಕೆ ಕಾರ್ಮಿಕರೇ ಹೆಚ್ಚಾಗಿ ವಾಸಿಸಿರುವ ಪ್ರದೇಶದಲ್ಲಿ ಭಾರಿ ಮಳೆಯಿಂದ ಉಂಟಾದ ದೊಡ್ಡ ಪ್ರಮಾಣದ ಭೂಕುಸಿತದಲ್ಲಿ ಸುಮಾರು 200 ಜನರು ಸಜೀವ ಸಮಾಧಿ ಆಗಿರಬಹುದು ಶಂಕಿಸಲಾಗಿದೆ.

ಸೇನೆಯ ಯೋಧರು ಭಾರಿ ಗಾತ್ರದ ಯಂತ್ರಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕೇಂದ್ರ ಬದುಲ್ಲಾ ಜಿಲ್ಲೆಯ ಮೀರಿ­ಬೆಡ್ಡಾ ಚಹಾ ತೋಟದಲ್ಲಿ ಮಳೆಯಿಂದ ಉಂಟಾದ ಭೂಕುಸಿತದಿಂದ 120 ಮನೆ­ಗಳು ನೆಲಸಮವಾಗಿವೆ. ಈ ಪ್ರದೇಶದಲ್ಲಿ 192 ಜನರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಹಾ­ಯಕ ನಿರ್ದೇಶಕ ಪ್ರದೀಪ್ ಕೊಡಿಪ್ಪಿಲಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ 817 ನಿರ್ವಸತಿ­ಗರಿಗೆ ಎರಡು ಕಡೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ.
ಮಣ್ಣಿನ ಅಡಿಯಲ್ಲಿ ಸಿಕ್ಕಿಹಾಕಿಕೊಂಡ­ವರು ಬದುಕುಳಿದಿರುವ ಸಾಧ್ಯತೆ ತೀರ ಕಡಿಮೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಮತ್ತು ಸೇನೆಯ ಸಿಬ್ಬಂದಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.