ADVERTISEMENT

ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆ ಬಗೆಹರಿಸಿಕೊಳ್ಳಲು ಪಾಕಿಸ್ತಾನಕ್ಕೆ ಚೀನಾ ಸಲಹೆ

ಪಿಟಿಐ
Published 22 ಸೆಪ್ಟೆಂಬರ್ 2017, 14:04 IST
Last Updated 22 ಸೆಪ್ಟೆಂಬರ್ 2017, 14:04 IST
ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆ ಬಗೆಹರಿಸಿಕೊಳ್ಳಲು ಪಾಕಿಸ್ತಾನಕ್ಕೆ ಚೀನಾ ಸಲಹೆ
ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆ ಬಗೆಹರಿಸಿಕೊಳ್ಳಲು ಪಾಕಿಸ್ತಾನಕ್ಕೆ ಚೀನಾ ಸಲಹೆ   

ಬೀಜಿಂಗ್‌: ಭಾರತದೊಂದಿಗೆ ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಚೀನಾ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.

ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕು ಎಂದು ಪಾಕಿಸ್ತಾನ ಒತ್ತಾಯಿಸುತ್ತಿದೆ. ಆದರೆ, ಈ ಸಮಸ್ಯೆಯನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ಚೀನಾ ಹೇಳಿದೆ.

‘ಕಾಶ್ಮೀರದ ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಪಾಕಿಸ್ತಾನವು ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬೇಕು’ ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರ ಲು ಕಂಗ್‌ ಹೇಳಿದ್ದಾರೆ.

ADVERTISEMENT

‘ಭಾರತ ಮತ್ತು ಪಾಕಿಸ್ತಾನ ನಿರಂತರ ಮಾತುಕತೆಗಳ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ. ಈ ಭಾಗದಲ್ಲಿ ಶಾಂತಿ ಹಾಗೂ ಸುಸ್ಥಿರತೆ ಕಾಯ್ದುಕೊಳ್ಳಲು ಎರಡೂ ರಾಷ್ಟ್ರಗಳು ಮುಂದಾಗಬೇಕು’ ಎಂದು ಕಂಗ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.