ADVERTISEMENT

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಸಿದ್ಧ: ಪಾಕ್

ಪಿಟಿಐ
Published 20 ಜುಲೈ 2017, 19:30 IST
Last Updated 20 ಜುಲೈ 2017, 19:30 IST
ತಹಮೀನಾ
ತಹಮೀನಾ   

ಇಸ್ಲಾಮಾಬಾದ್‌: ಕಾಶ್ಮೀರ ವಿಷಯ ಸೇರಿದಂತೆ ಎಲ್ಲ ವಿಚಾರಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ತಹಮೀನಾ ಜಂಜುವಾ ತಿಳಿಸಿದ್ದಾರೆ.

ಇಸ್ಲಾಮಾಬಾದಿನಲ್ಲಿರುವ ಐರೋಪ್ಯ ಒಕ್ಕೂಟದ ವಿವಿಧ ದೇಶಗಳ ರಾಯಭಾರಿಗಳ ಜತೆಗೆ ತಮ್ಮ ಕಚೇರಿಯಲ್ಲಿ ನಡೆಸಿದ ಮಾತುಕತೆ ವೇಳೆ ಈ ವಿಷಯ ತಿಳಿಸಿದ್ದಾರೆ.

ಇದೇ ವೇಳೆ, ಭಾರತದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ ಅವರು, ‘ಕಾಶ್ಮೀರದಲ್ಲಿ ಭಾರತವು ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದೆ’ ಎಂದೂ ಆರೋಪಿಸಿದರು.

ADVERTISEMENT

ಪಾಕಿಸ್ತಾನದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯೋತ್ಪಾದಕರ ನಿಗ್ರಹಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆಯೂ ತಹಮೀನಾ ಇದೇ ವೇಳೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.