ADVERTISEMENT

ಮಾಲ್‌ ಮೇಲೆ ದಾಳಿ: 9 ಮಂದಿಗೆ ಗಾಯ

ಪಿಟಿಐ
Published 26 ಸೆಪ್ಟೆಂಬರ್ 2016, 19:30 IST
Last Updated 26 ಸೆಪ್ಟೆಂಬರ್ 2016, 19:30 IST

ಹ್ಯೂಸ್ಟನ್:  ಇಲ್ಲಿನ ಜನನಿಬಿಡ ಮಾಲ್‌ವೊಂದರಲ್ಲಿ ಅಪರಿಚಿತ ಬಂದೂಕುಧಾರಿಯೊಬ್ಬ ಕೆಲ ಸುತ್ತಿನ ಗುಂಡಿನ ದಾಳಿ ನಡೆಸಿದ್ದು, ಒಂಬತ್ತು  ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ನೈಋತ್ಯ ಹ್ಯೂಸ್ಟನ್‌ನ ವೆಸ್ಲೆಯಾನ್ ಆ್ಯಂಡ್ ಬಿಸ್ಸೊನೆಟ್‌ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಮೇಲೆ ನಮ್ಮ ಅಧಿಕಾರಿಗಳು ಪ್ರತಿದಾಳಿ ನಡೆಸಿದ್ದಾರೆ’ ಎಂದು ಹ್ಯೂಸ್ಟನ್ ಪೊಲೀಸರು ಟ್ವೀಟ್ ಮಾಡಿದ್ದಾರೆ. ಗಾಯಗೊಂಡ ದಾಳಿಕೋರನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲಿ ಆತ ಮೃತಪಟ್ಟಿದ್ದ.

ಎಕೆ–47 ಮತ್ತು ಎಆರ್–15 ಬಂದೂಕಿನಿಂದ ಸುಮಾರು 100 ಸುತ್ತಿನ ಗುಂಡಿನ ದಾಳಿ ನಡೆಸಿದ ಸದ್ದು ಕೇಳಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.