ADVERTISEMENT

ರನ್‌ವೇಯಿಂದ ಜಾರಿದ ಟರ್ಕಿ ವಿಮಾನ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2015, 12:14 IST
Last Updated 4 ಮಾರ್ಚ್ 2015, 12:14 IST
– ಸಾಂದರ್ಭಿಕ ಚಿತ್ರ
– ಸಾಂದರ್ಭಿಕ ಚಿತ್ರ   

ಕಠ್ಮಂಡು: ಟರ್ಕಿ ಏರ್‌ಲೈನ್ಸ್‌ಗೆ ಸೇರಿದ ವಿಮಾನವೊಂದು ಲ್ಯಾಂಡಿಗ್‌ ವೇಳೆ ರನ್‌ ವೇ ಯಿಂದ ಜಾರಿ ಪಕ್ಕಕ್ಕೆ ಚಲಿಸಿದ ಘಟನೆ ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದಿದೆ. ಆದರೆ ಯಾವುದೇ ಹಾನಿ ಸಾವು-ನೋವು ಸಂಭವಿಸಿಲ್ಲ. ವಿಮಾನದಲ್ಲಿದ್ದರ ಎಲ್ಲ 238 ಮಂದಿ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ.

ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೈಲಟ್‌ ವಿಮಾನ ಲ್ಯಾಂಡಿಂಗ್‌ ಮಾಡುವ ಎರಡನೇ ಪ್ರಯತ್ನದಲ್ಲಿದ್ದಾಗ ವಿಮಾನದ ಮುಂದಿನ ಚಕ್ರ ರನ್‌ವೇಯಿಂದ ಜಾರಿತು. ಇದರಿಂದ ವಿಮಾನದ ಮುಂಭಾಗಕ್ಕೆ ಹಾನಿಯಾಗಿದೆ. ಆದರೆ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ADVERTISEMENT

ಇಸ್ತಾಂಬುಲ್‌ನಿಂದ ಬಂದ ವಿಮಾನದಲ್ಲಿದ್ದ ಎಲ್ಲ 238 ಮಂದಿ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮಂಜಿನ ಕಾರಣದಿಂದ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.