ADVERTISEMENT

ರಾಸಾಯನಿಕ ದಾಳಿಯಲ್ಲಿ 27 ಮಕ್ಕಳ ಸಾವು: ಯುನಿಸೆಫ್‌

ಐಎಎನ್ಎಸ್
Published 7 ಏಪ್ರಿಲ್ 2017, 19:34 IST
Last Updated 7 ಏಪ್ರಿಲ್ 2017, 19:34 IST

ವಿಶ್ವಸಂಸ್ಥೆ: ಸಿರಿಯಾದ ಇದ್ಲಿಬ್‌ ಪ್ರಾಂತ್ಯದಲ್ಲಿ ಮಂಗಳವಾರ ನಡೆದ ರಾಸಾಯನಿಕ ದಾಳಿಯಲ್ಲಿ 27 ಮಕ್ಕಳು ಮೃತಪಟ್ಟಿದ್ದಾರೆ ಎಂದು ಯುನಿಸೆಫ್‌ ತಿಳಿಸಿದೆ.

ಗಾಯಗೊಂಡಿರುವ 546 ಜನರ ಪೈಕಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.
ಈ ದಾಳಿಯಲ್ಲಿ ಸುಮಾರು 70 ಮಂದಿ ಸಾವಿಗೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಯುನಿಸೆಫ್‌, ವಿವಿಧ ಸಂಸ್ಥೆಗಳ ಸಹಭಾಗಿತ್ವದಲ್ಲಿ ದಾಳಿಗೆ ಗುರಿಯಾದವರ ಚಿಕಿತ್ಸೆಗಾಗಿ ಮೂರು ಸಂಚಾರಿ ಚಿಕಿತ್ಸಾಲಯಗಳು, ನಾಲ್ಕು ಆಸ್ಪತ್ರೆಗಳು ಮತ್ತು ಒಂಬತ್ತು ಆಂಬುಲೆನ್ಸ್‌ಗಳನ್ನು ನೀಡಿದೆ. ಅಗತ್ಯ ಔಷಧಗಳನ್ನು ಪೂರೈಸುತ್ತಿದೆ ಎಂದು ಹೇಳಿದೆ.

ADVERTISEMENT

‘ಸಿರಿಯಾದಲ್ಲಿ ನಡೆಯುತ್ತಿರುವ ಮಕ್ಕಳ ಹತ್ಯೆಯನ್ನು ಇನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ದುಷ್ಕೃತ್ಯಗಳನ್ನು ಕೊನೆಗೊಳಿಸಲು ಎಲ್ಲರೂ ಒಗ್ಗೂಡುವ ಅಗತ್ಯವಿದೆ’ ಎಂದು ಯುನಿಸೆಫ್‌ ಪ್ರಾಂತೀಯ ನಿರ್ದೇಶಕ  ಗೀರ್ತ್‌ ಕ್ಯಾಪೆಲೆರೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.