ADVERTISEMENT

ಲಿಚಿ ಹಣ್ಣಿನಿಂದ ವಿಚಿತ್ರ ಕಾಯಿಲೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2015, 19:30 IST
Last Updated 30 ಜನವರಿ 2015, 19:30 IST

ವಾಷಿಂಗ್ಟನ್‌ (ಪಿಟಿಐ): ಲಿಚಿ ಹಣ್ಣಿನಲ್ಲಿರುವ ವಿಷಕಾರಿ ಅಂಶವು ವಿಚಿತ್ರ ರೋಗ ಹಾಗೂ ಮಕ್ಕಳಲ್ಲಿ ಮಿದುಳಿಗೆ ಸಂಬಂಧಿಸಿದ ಕಾಯಿಲೆ­ಗಳಿಗೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಅಮೆರಿಕದ ಸಂಶೋಧ­ಕರು ಅಭಿಪ್ರಾಯ­ಪಟ್ಟಿದ್ದಾರೆ.

ಬಿಹಾರದ ಮುಜಪ್ಫರ್‌ಪುರ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ 1995ರಿಂದಲೂ ಲಿಚಿ ಹಣ್ಣಿನಿಂದ ಈ ಕಾಯಿಲೆ ಹರಡುತ್ತಿರುವುದು ಕಂಡುಬಂದಿದೆ ಎಂದು ಸಂಶೋಧಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.