ADVERTISEMENT

ವಿಚಾರಣೆಗಾಗಿ ದೇಶಕ್ಕೆ ಮರಳಿದ ನವಾಜ್‌ ಷರೀಫ್

ಪಿಟಿಐ
Published 23 ಏಪ್ರಿಲ್ 2018, 19:38 IST
Last Updated 23 ಏಪ್ರಿಲ್ 2018, 19:38 IST
ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನವಾಜ್‌ ಷರೀಫ್‌
ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನವಾಜ್‌ ಷರೀಫ್‌   

ಇಸ್ಲಾಮಾಬಾದ್‌: ಭ್ರಷ್ಟಾಚಾರ ಪ್ರಕರಣ ಸಂಬಂಧ ನಡೆಯುತ್ತಿರುವ ವಿಚಾರಣೆಗಾಗಿ ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನವಾಜ್‌ ಷರೀಫ್‌ ಲಂಡನ್‌ನಿಂದ ದೇಶಕ್ಕೆ ಸೋಮವಾರ ಮರಳಿದರು.

ಕಳೆದ ಸೆಪ್ಟೆಂಬರ್‌ನಲ್ಲಿ ಷರೀಫ್‌ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದವು. ಪನಾಮ ಪೇಪರ್ಸ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಜುಲೈ 28ರಂದು ಷರೀಫ್‌ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿತು.

ಷರೀಫ್‌ ಅವರೊಂದಿಗೆ ಮಗಳು ಮರಿಯಮ್, ಅಳಿಯ ಮೊಹಮ್ಮದ್ ಸಫ್ದರ್ ಕೂಡ ವಿಚಾರಣೆಗಾಗಿ ಬಂದಿ ದ್ದಾರೆ. ರಾಜಕೀಯ ದುರುದ್ದೇಶದಿಂದ ಈ ಪ್ರಕರಣಗಳಲ್ಲಿ ತಮ್ಮನ್ನು ಸಿಲುಕಿಸಲಾಗಿದೆ ಎಂದು ನವಾಜ್ ಆರೋಪಿಸಿದ್ದಾರೆ.‌

ADVERTISEMENT

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿರುದ್ಧವೂ ಷರೀಫ್ ಟೀಕೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.