ADVERTISEMENT

ಶ್ರೀಲಂಕಾ ಪ್ರವಾಹ: 25 ಸಾವು, 42 ಜನ ನಾಪತ್ತೆ

ಏಜೆನ್ಸೀಸ್
Published 26 ಮೇ 2017, 12:58 IST
Last Updated 26 ಮೇ 2017, 12:58 IST
ಎಪಿ ಚಿತ್ರಗಳು
ಎಪಿ ಚಿತ್ರಗಳು   

ಕೊಲಂಬೊ: ಶ್ರೀಲಂಕಾದಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆ ಹಾಗೂ ಭೂ ಕುಸಿತದಿಂದಾಗಿ 25 ಜನ ಸಾವನ್ನಪ್ಪಿದ್ದು, 42ಕ್ಕೂ ಹೆಚ್ಚು ಜನ ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.

400 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಸುಮಾರು 7800ಕ್ಕೂ ಹೆಚ್ಚು ಜನ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ದ್ವೀಪ ರಾಷ್ಟ್ರ ಲಂಕಾದಲ್ಲಿ ಈ ವರ್ಷ ದಾಖಲಾಗಿರುವ ಅತಿ ಹೆಚ್ಚಿನ ಪ್ರಮಾಣದ ಮಳೆ ಇದಾಗಿದ್ದು, ದೇಶದ ಪಶ್ಚಿಮ ಕರಾವಳಿ ವ್ಯಾಪ್ತಿಯಲ್ಲಿರುವ ಕಲುತರಾ ಜಿಲ್ಲೆಯ ಐದು ಕಡೆ ಭೂಕುಸಿತ ಸಂಭವಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. 

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿರುವ ಲಂಕಾ ಗೃಹ ಖಾತೆ ವ್ಯವಹಾರಗಳ ಸಚಿವ ವಾಜಿರಾ ಅಬೇವರ್ಧನ ಮುಂದಿನ 72 ಗಂಟೆಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಮುನ್ಸೂಚನೆಯಿದೆ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.