ADVERTISEMENT

ಹಫೀಜ್ ಸಯೀದ್ ಗೃಹ ಬಂಧನದ ಅವಧಿ ಎರಡು ತಿಂಗಳು ವಿಸ್ತರಣೆ

ಏಜೆನ್ಸೀಸ್
Published 1 ಆಗಸ್ಟ್ 2017, 11:45 IST
Last Updated 1 ಆಗಸ್ಟ್ 2017, 11:45 IST
ಹಫೀಜ್‌ ಸಯೀದ್ (ಸಂಗ್ರಹ ಚಿತ್ರ)
ಹಫೀಜ್‌ ಸಯೀದ್ (ಸಂಗ್ರಹ ಚಿತ್ರ)   

ಇಸ್ಲಾಮಾಬಾದ್: ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್‌ ಗೃಹ ಬಂಧನದ ಅವಧಿಯನ್ನು ಪಾಕಿಸ್ತಾನದ ಪಂಜಾಬ್‌ ಸರ್ಕಾರ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡಿದೆ.

ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೃಹ ಸಚಿವಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಸಯೀದ್‌ ಮತ್ತು ಆತನ ನಾಲ್ವರು ಸಹಚರರನ್ನು ಜನವರಿ 31ರಿಂದ ಗೃಹ ಬಂಧನದಲ್ಲಿರಿಸಲಾಗಿದೆ. ಏಪ್ರಿಲ್‌ನಲ್ಲಿ ಗೃಹ ಬಂಧನವನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಇದೀಗ ಮತ್ತೆ ಗೃಹಬಂಧನದ ಅವಧಿ ವಿಸ್ತರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.