ADVERTISEMENT

10 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಅಫ್ಘಾನ್ ಭದ್ರತಾ ಪಡೆ

ಏಜೆನ್ಸೀಸ್
Published 30 ಡಿಸೆಂಬರ್ 2017, 11:43 IST
Last Updated 30 ಡಿಸೆಂಬರ್ 2017, 11:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾಬೂಲ್: ಅಫ್ಘಾನಿಸ್ತಾನದ ಉರುಜಾನ್ ವಲಯದಲ್ಲಿ ಶನಿವಾರ ಅಫ್ಘಾನ್ ಭದ್ರತಾ ಪಡೆ ಹಾಗೂ ತಾಲಿಬಾನ್ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 10 ತಾಲಿಬಾನ್ ಉಗ್ರರ ಹತ್ಯೆಯಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಒಬ್ಬ ಅಫ್ಘಾನಿಸ್ತಾನದ ಯೋಧ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ.

ಶಿಖಾ ಎಂಬ ಪ್ರದೇಶದ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ್ದರು. ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಭದ್ರತಾ ಪಡೆ ಉಗ್ರರನ್ನು ಒಳಗೆ ನುಸುಳದಂತೆ ತಡೆಯೊಡ್ಡಿತ್ತು. ಆಗ ಎರಡು ಪಡೆಗಳ ನಡುವೆ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.