ಪುತ್ರಜಾಯ: ಭ್ರಷ್ಟಾಚಾರ ಪ್ರಕರಣದ ಆರೋಪದಡಿ ಮಲೇಷ್ಯಾದ ಮಾಜಿ ಪ್ರಧಾನಿ ನಜೀಬ್ ರಜಾಕ್ ಅವರನ್ನು ಬಂಧಿಸಲಾಗಿದೆ.
ಕಳೆದ ಮೇ 9 ರಂದು ನಡೆದ ಚುನಾವಣೆಯಲ್ಲಿ ಅವರ ಪಕ್ಷ ಸೋಲುಂಡ ಎರಡು ತಿಂಗಳ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ.
ನಜೀಬ್ ಅವರ ನಿವಾಸದಲ್ಲಿಯೇ ಅವರನ್ನು ಬಂಧಿಸಿ,ಭ್ರಷ್ಟಾಚಾರ ವಿರೋಧಿ ಆಯೋಗದ ಪ್ರಧಾನ ಕಚೇರಿಗೆ ಕರೆದುಕೊಂಡು ಹೋಗಲಾಯಿತು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.