ADVERTISEMENT

ಅನಧಿಕೃತ ಕಟ್ಟಡ ನಿರ್ಮಾಣ ನಿಲ್ಲಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 2 ಮಾರ್ಚ್ 2015, 19:30 IST
Last Updated 2 ಮಾರ್ಚ್ 2015, 19:30 IST

ಹೆಬ್ಬಾಳ ಗುಡ್ಡದ ಹಳ್ಳಿಯಲ್ಲಿ ಪಾಲಿಕೆಯ ಸ್ವತ್ತಲ್ಲಿ ಕೆಲವು ವ್ಯಕ್ತಿಗಳು ನಿವೇಶನ ನಿರ್ಮಿಸಲು ಮುಂದಾಗಿದ್ದಾರೆ. ಆದರೆ ಇದು ಸಾರ್ವಜನಿಕರು ಓಡಾಡುವ ಹಾಗೂ ಮಳೆ ನೀರು ಮತ್ತು ಸ್ಯಾನಿಟರಿ ನೀಡುವ ಹರಿಯುವ ಮಾರ್ಗವಾಗಿದ್ದು, ಇದನ್ನು ಕಾನೂನು ಬಾಹಿರವಾಗಿ ಮುಚ್ಚಲಾಗಿದೆ. ಇದರಿಂದ ಮಳೆ ಬಂದಾಗ ಹರಿಯುವ ನೀರು ಮನೆಗಳಿಗೆ ಹಾಗೂ ಶಾಲೆಗೆ ನುಗ್ಗಿ ತುಂಬಾ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಅಲ್ಲದೆ ಜೀವಹಾನಿ ಆಗುವ ಸಂಭವ ಇದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ, ಬಿಬಿಎಂಪಿ ಮುಖ್ಯ ಮತ್ತು ಸಹಾಯಕ ಎಂಜಿನಿಯರ್‌ಗಳಿಗೆ ಹಾಗೂ ಸ್ಥಳೀಯ ಪಾಲಿಕೆ ಸದಸ್ಯರಿಗೂ ಮನವಿ ಕಳುಹಿಸಲಾಗಿದೆ. ಆದರೆ ಇದಕ್ಕೆ ಯಾರೊಬ್ಬರೂ ಸ್ಪಂದಿಸಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಮನೆಗಳಿಗೆ ಮತ್ತು ಶಾಲೆಗೆ ನೀರು ನುಗ್ಗುವುದು ಸಾಮಾನ್ಯ. ಇಲ್ಲಿನ ಮನೆಗಳಲ್ಲಿ ಹಿರಿಯ ನಾಗರಿಕರು, ಚಿಕ್ಕ ಮಕ್ಕಳು ಹೆಚ್ಚಾಗಿ ಇದ್ದಾರೆ. ಈ ವರ್ಷದ ಮಳೆಗಾಲದಲ್ಲಿ ನಾವು ನಮ್ಮ ಸ್ವಂತ ಮನೆಗಳನ್ನು ಬಿಟ್ಟು ಹೋಗಲು ಆಗುವುದಿಲ್ಲ. ಬೇರೆ ದಾರಿ ಇಲ್ಲದೆ ಮಳೆ ನೀರಿಗೆ ಸಿಲುಕಿ ಪ್ರಾಣ ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿಯ ದುರಂತ ನಡೆಯದಂತೆ ಸಂಬಂಧಪಟ್ಟವರು ಇನ್ನಾದರೂ ಮಳೆಗಾಲಕ್ಕೆ ಮುಂಚಿತವಾಗಿ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.