ADVERTISEMENT

ಅವೈಜ್ಞಾನಿಕ ತೀರ್ಪು

ಡಾ.ಬಸವರಾಜ್ ಎನ್.ಅಕ್ಕಿ ಧಾರವಾಡ
Published 28 ಜುಲೈ 2016, 19:30 IST
Last Updated 28 ಜುಲೈ 2016, 19:30 IST

ಮಹಾದಾಯಿ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀಡಿರುವ ತೀರ್ಪು ನಿಜವಾಗಿಯೂ ಅವೈಜ್ಞಾನಿಕವಾಗಿದೆ. ದಿವಂಗತ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಇಡೀ ದೇಶದ ಪ್ರಮುಖ ನದಿಗಳ ಜೋಡಣೆಯ ಕನಸು ಕಂಡಿದ್ದರು.

ದೇಶದ ಹಿತದೃಷ್ಟಿಯಿಂದ ರಾಜ್ಯಗಳು ಪರಸ್ಪರ ಸಹಕಾರ ನೀಡುವುದು ಅನಿವಾರ್ಯ  ಮತ್ತು ಅವಶ್ಯ. ಆದರೆ ಧಾರವಾಡ, ಗದಗ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಕುಡಿಯುವ ನೀರಿನ ಬವಣೆ ನೀಗಿಸುವ ಉದ್ದೇಶದ ಈ ಮಹತ್ವಾಕಾಂಕ್ಷಿ ಯೋಜನೆಗೆ ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿರುವುದು ದುರದೃಷ್ಟಕರ.

ದೇಶದ ಇತರ ನದಿಗಳು ಬೇರೆ ಬೇರೆ ರಾಜ್ಯಗಳಿಗೆ ಮತ್ತು ವಿದೇಶಗಳಿಗೆ ಹರಿಯುತ್ತಿಲ್ಲವೇ? ಆ ಪ್ರದೇಶಗಳು ಈ ನದಿಗಳ ನೀರನ್ನು ಬಳಸಿಕೊಂಡು ಜಲಾಶಯ ನಿರ್ಮಾಣ, ವಿದ್ಯುತ್‌ ಉತ್ಪಾದನೆ ಮಾಡುತ್ತಿಲ್ಲವೇ?

ಗೋವಾ, ಮಹಾರಾಷ್ಟ್ರ, ಕರ್ನಾಟಕ ಸರ್ಕಾರಗಳು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಜನಪರ ತೀರ್ಮಾನ ಕೈಗೊಳ್ಳಬೇಕು. ಆಗ ಭಾವೈಕ್ಯ, ರಾಷ್ಟ್ರೀಯತೆಗೆ ನಿಜವಾದ ಅರ್ಥ ಬರುತ್ತದೆ. ಇದನ್ನು ನ್ಯಾಯಮಂಡಳಿ ಸಹ ಅರಿಯಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT