ADVERTISEMENT

ಆಯ್ಕೆ ಪ್ರಕ್ರಿಯೆ ಚುರುಕಾಗಲಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2016, 19:30 IST
Last Updated 24 ಅಕ್ಟೋಬರ್ 2016, 19:30 IST

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಡೆಗೂ ಕೆಪಿಎಸ್‌ಸಿ ಪ್ರಕಟಿಸಿದೆ. ಈ ಕಾರ್ಯಕ್ಕೆ ಆಯೋಗವು ಸುದೀರ್ಘ ಒಂದು ವರ್ಷ ಅವಧಿಯನ್ನು ಬಳಸಿಕೊಂಡಿದೆ.  ನೇಮಕಾತಿಯನ್ನು ಹೀಗೆ ವಿಳಂಬ ಮಾಡುತ್ತಾ ಹೋದರೆ ಕೆಪಿಎಸ್‌ಸಿ ಮೇಲಿನ ವಿಶ್ವಾಸ ಕುಸಿಯುತ್ತದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಹಾಯಕರ ಹುದ್ದೆಗಳು ಖಾಲಿಬಿದ್ದಿವೆ. ಇದರಿಂದಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಕೆಪಿಎಸ್‌ಸಿ ಆದಷ್ಟು ಬೇಗ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ನೇಮಕಾತಿ ಪ್ರಾಧಿಕಾರಗಳಿಗೆ ಕಳುಹಿಸುವುದು ಒಳ್ಳೆಯದು.
-ರಮೇಶ್‌ ಪೈ,  ತೀರ್ಥಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.