ADVERTISEMENT

ಆವಿಷ್ಕಾರಗಳಾಗಲಿ

ವಾಚಕರ ವಾಣಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2017, 19:30 IST
Last Updated 4 ಜನವರಿ 2017, 19:30 IST
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಎಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಕೋರ್ಸ್‌ಗಳ ಪಠ್ಯಪುಸ್ತಕಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಪ್ರಕಟಿಸುವ ಪ್ರಕ್ರಿಯೆಗೆ ಚಾಲನೆ ನೀಡಿರುವುದು ಸಂತಸದ ವಿಷಯ. 
 
ಆದರೆ ಪಠ್ಯಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು. ಭಾಷೆ, ಬೋಧನಾಶೈಲಿ ಬದಲಾಗಬೇಕು, ಉದ್ಯೋಗಾವಕಾಶ ಸೃಷ್ಟಿಯಾಗಬೇಕು. ಇಲ್ಲದಿದ್ದರೆ ಕುವೆಂಪು ಹೇಳಿದಂತೆ, ‘ಆಂಗ್ಲ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯರೋಗಿಯಂತೆ ಇರಬೇಕಾಗುತ್ತದೆ’.
 
ಪ್ರಾದೇಶಿಕ ಭಾಷೆಯು ಕಲಿಕಾ ಮಾಧ್ಯಮವಾಗಿ, ಉನ್ನತ ಜ್ಞಾನ ವಾಹಕವಾಗಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಂತಹ ಯೋಜನೆಗಳನ್ನು ಸರ್ಕಾರಗಳು ಹಮ್ಮಿಕೊಳ್ಳಬೇಕು.
-ರೇವಣ್ಣ ಎಂ.ಜಿ., ಕೆ.ಆರ್.ಪೇಟೆ
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.