ADVERTISEMENT

ಜಾಗೃತಿದಳ: ಕ್ರಮ ಅಗತ್ಯ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2017, 19:30 IST
Last Updated 22 ನವೆಂಬರ್ 2017, 19:30 IST

ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆಯೇ ಹೊರತು ಕಡಿಮೆ ಆಗುತ್ತಿಲ್ಲ. ಈ ಸಂಬಂಧದ ಪ್ರಕರಣಗಳು ದಾಖಲಾದರೂ ಅದರಿಂದ ಏನೂ ಪ್ರಯೋಜನವಾಗುತ್ತಿಲ್ಲ. ಹೀಗಾದರೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸುರಕ್ಷೆಯ ವಾತಾವರಣ ರೂಪಿಸುವುದು ಯಾವಾಗ?

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಿಳಾ ಆಯೋಗವು ಜಿಲ್ಲಾ ಮಟ್ಟದಲ್ಲಿ ‘ಮಹಿಳಾ ಜಾಗೃತಿ ದಳ’ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.  ಆದರೆ ಈ ಪ್ರಸ್ತಾವವನ್ನು ಸರ್ಕಾರ ಮೂಲೆಗುಂಪು ಮಾಡಿದೆ. ಈ ಬಗ್ಗೆ ಸರ್ಕಾರ ಇನ್ನಾದರೂ ಕ್ರಮ ಕೈಗೊಳ್ಳಲಿ.

–ನಿರ್ಮಲ, ಟಿ. ಲಕ್ಕಿಹಳ್ಳಿ, ಹೊಸದುರ್ಗ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.