ADVERTISEMENT

ತಲ್ಲಣಿಸದಿರು...!

​ಪ್ರಜಾವಾಣಿ ವಾರ್ತೆ
Published 17 ಜುಲೈ 2017, 19:30 IST
Last Updated 17 ಜುಲೈ 2017, 19:30 IST

ಕಡಲೆಕಾಯಿ ಸಿಪ್ಪೆಯೊಳಗೆ ಗಾಂಜಾ! (ಪ್ರ.ವಾ., ಜುಲೈ 15). ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಕೆಲ ಕೈದಿಗಳಿಗೆ ಕಡಲೆಕಾಯಿ ಸಿಪ್ಪೆಯೊಳಗೆ ಗಾಂಜಾ ತುಂಬಿ ರವಾನಿಸುತ್ತಿದ್ದ ಪ್ರಕರಣ ವರದಿಯಾಗಿದೆ!

ಈ ಸುದ್ಧಿಯನ್ನು ಓದಿದೊಡನೆ ಕನಕದಾಸರ ‘ತಲ್ಲಣಿಸದಿರು ಕಂಡ್ಯ ತಾಳು ಮನವೇ’ ಎಂಬ ಕೀರ್ತನೆ ನೆನಪಾಯಿತು.

‘ಕಲ್ಲಿನಲ್ಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ
ಅಲ್ಲಲ್ಲಿಗಾಹಾರವನ್ನು ತಂದಿತ್ತವರು ಯಾರು
ಬಲ್ಲಿದನು ಕಾಗಿನೆಲೆಯಾದಿಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ’       
ಕಲ್ಲಿನಲ್ಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ ಅಲ್ಲಲ್ಲಿಗಾಹಾರ ವನ್ನು ನೀಡುವ ಭಗವಂತ ಒಂದೆಡೆಯಾದರೆ ಕಾರಾಗೃಹದ ಕೈದಿಗಳಿಗೆ ಕಡಲೆಕಾಯಿ ಸಿಪ್ಪೆಯೊಳಗೆ ಗಾಂಜಾ ತುಂಬಿ ರವಾನಿಸುವ ಕಿಡಿಗೇಡಿಗಳು ಮತ್ತೊಂದೆಡೆ...

ADVERTISEMENT

-ಪಿ.ಜೆ.ರಾಘವೇಂದ್ರ, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.