ADVERTISEMENT

ಪರೀಕ್ಷೆಗೆ ಅವಕಾಶ

ಮಂಜುನಾಥ ಆರ್., ತೀರ್ಥಹಳ್ಳಿ
Published 1 ಜುಲೈ 2015, 19:30 IST
Last Updated 1 ಜುಲೈ 2015, 19:30 IST

ಕೆ.ಪಿ.ಎಸ್.ಸಿ. ಪ್ರೊಬೆಷನರಿ ಗ್ರೇಡ್ ಎ ಮತ್ತು ಬಿ ಹುದ್ದೆಗಳ ಮುಖ್ಯ ಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜುಲೈ 10ರಂದು ಕೊನೆಯ ದಿನಾಂಕ. ಪೂರ್ವಭಾವಿ ಪರೀಕ್ಷೆಗೆ ಹಾಜರಾಗಲು ಪದವಿ ಹಂತದ ಕೊನೆಯ ವರ್ಷದಲ್ಲಿದ್ದ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿತ್ತು.

ಇದರಿಂದ ಕೆಲವು ವಿದ್ಯಾರ್ಥಿಗಳು ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಖ್ಯ  ಪರೀಕ್ಷೆ ಬರೆಯುವ ಅರ್ಹತೆ ಪಡೆದುಕೊಂಡಿದ್ದಾರೆ. ಆದರೆ ಕೆ.ಪಿ.ಎಸ್.ಸಿ. ನಿಯಮದ ಪ್ರಕಾರ, ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಪದವಿ ಪೂರ್ಣಗೊಂಡಿರಬೇಕು. ಆದರೆ ಪದವಿ ಪರೀಕ್ಷೆಯ ಕೊನೆಯ ವರ್ಷದ ಪರೀಕ್ಷಾ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ.

ಅರ್ಜಿ ಸಲ್ಲಿಕೆಗೆ ನಿಗದಿಯಾಗಿರುವ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳ ಪದವಿ ಫಲಿತಾಂಶ ಪ್ರಕಟವಾಗದಿದ್ದಲ್ಲಿ  ಅಂತಹವರು ಮುಖ್ಯ ಪರೀಕ್ಷೆಗೆ ಹಾಜರಾಗುವ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಕೆ.ಪಿ.ಎಸ್.ಸಿ. ಅರ್ಜಿ ಸಲ್ಲಿಕೆ  ದಿನಾಂಕವನ್ನು 10– 15 ದಿನಗಳಷ್ಟು ಮುಂದೂಡಿದರೆ ಎಲ್ಲ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.