ADVERTISEMENT

ಮತಬ್ಯಾಂಕ್...

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2017, 19:30 IST
Last Updated 27 ಮಾರ್ಚ್ 2017, 19:30 IST

‘ಸಾಮಾಜಿಕ ನ್ಯಾಯ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಸಲುವಾಗಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 72ಕ್ಕೆ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಅಹಿಂದ’ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಇರುವ ಮೀಸಲಾತಿಯ ಅನುಪಾತದಿಂದ  ಕೆಲವು ಸಮುದಾಯಗಳ ಪ್ರತಿಭಾನ್ವಿತರಿಗೆ ಅನ್ಯಾಯವಾಗುತ್ತಿದೆ. ಇಂಥ ಸಂದರ್ಭದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದರೆ ಉಳಿದವರು ಎಲ್ಲಿಗೆ ಹೋಗಬೇಕು? ಕಲಿಕೆಗೆ ಮೀಸಲಾತಿ ಇರಲಿ. ನೇಮಕಾತಿಗೆ  ಬೇಡ. ಪ್ರತಿಭೆ ಇದ್ದವರು ಕಲಿತು ಉದ್ಯೋಗ ಪಡೆಯುತ್ತಾರೆ.

-ಕಿರಣ ಪ. ನಾಯ್ಕನೂರ, ಯಾವಗಲ್‌,  ರೋಣ ತಾಲ್ಲೂಕು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.