ADVERTISEMENT

ಮೊತ್ತ ಗೋಪ್ಯವಾಗಿಡಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 30 ಜೂನ್ 2015, 19:30 IST
Last Updated 30 ಜೂನ್ 2015, 19:30 IST

ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು  ಹೆಚ್ಚಾಗುತ್ತಿರುವುದು ದುರ್ದೈವದ ಸಂಗತಿ. ಈ ಸಂದರ್ಭದಲ್ಲಿ ಅವರಿಗೆ ಸಾಂತ್ವನ ಹೇಳುವುದರೊಂದಿಗೆ ಆತ್ಮಹತ್ಯೆ ಸಮೂಹಸನ್ನಿ ಆಗುತ್ತಿರುವುದನ್ನು ತಡೆಯಬೇಕಾದ ಜವಾಬ್ದಾರಿ ಪ್ರಜ್ಞಾವಂತ ನಾಗರಿಕರದ್ದಾಗಿದೆ.

ಸಾಲದ ಬಾಧೆಗೆ ತುತ್ತಾದ ರೈತರು ತಾವು ಸತ್ತರೆ ಪರಿಹಾರ ದೊರೆತು ಕುಟುಂಬದವರಾದರೂ  ಸುಖವಾಗಿರುತ್ತಾರೆ ಎಂಬ ಕಾರಣದಿಂದ ಆತ್ಮಹತ್ಯೆಗೆ ಶರಣಾಗುವ ಅಪಾಯವನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ  ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಕೊಡುವ ಪರಿಹಾರದ ಮೊತ್ತವನ್ನು ಸರ್ಕಾರ ಗೋಪ್ಯವಾಗಿಡಬೇಕು. ಮಾಧ್ಯಮಗಳೂ ಸಹಕರಿಸಬೇಕು. ಇಲ್ಲವಾದರೆ ಆರ್ಥಿಕ ಪರಿಹಾರ ಪರೋಕ್ಷವಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತೆ ಆಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.