ADVERTISEMENT

ರಾಜ– ಸಾಮಂತ

​ಪ್ರಜಾವಾಣಿ ವಾರ್ತೆ
Published 17 ಜೂನ್ 2018, 17:10 IST
Last Updated 17 ಜೂನ್ 2018, 17:10 IST

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರಿ ಹಿನ್ನಡೆ ಆನುಭವಿಸಿದ್ದು ನಿಜ. ಹೀಗಿರುವಾಗ ಅವರ ವರ್ತನೆಯಲ್ಲಿ ಬದಲಾವಣೆ ಕಾಣಬೇಕಿತ್ತು. ಆದರೆ ಹಾಗಾಗಿಲ್ಲ. ಜೆಡಿಎಸ್‌– ಕಾಂಗ್ರೆಸ್‌ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಅವರು ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರವನ್ನು ಅದರಲ್ಲೂ ಮುಖ್ಯವಾಗಿ ಕುಮಾರಸ್ವಾಮಿ ಅವರನ್ನು ನಿಯಂತ್ರಿಸಲು ಹೊರಟಿದ್ದಾರೆ. ಇದು ಸರಿಯಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಬೇಕಾದದ್ದನ್ನು ಬಹಿರಂಗವಾಗಿ ಹೇಳುವುದು ಉಚಿತವಲ್ಲ. ಸಿದ್ದರಾಮಯ್ಯ ಮತ್ತು ಅವರ ಸರ್ಕಾರವನ್ನು ಜನರು ತಿರಸ್ಕರಿಸಿದರೆಂದರೆ, ಅವರು ಮಂಡಿಸಿದ ಬಜೆಟ್‌ ಅನ್ನೂ ಜನರು ತಿರಸ್ಕರಿಸಿದ್ದಾರೆ ಎಂದು ಅರ್ಥವಲ್ಲವೇ?

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್‌ಗೆ ಪೂರಕ ಬಜೆಟ್ ಮಂಡಿ ಸದೆ, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿ. ಅದು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರಬಂದರೆ ಅವರ ಮತ್ತು ರಾಜ್ಯದ ಆತ್ಮಗೌರವಕ್ಕೆ ಬೆಲೆ ಕೊಟ್ಟಂತಾಗುತ್ತದೆ. ಸಿದ್ದರಾಮಯ್ಯ ರಾಜನಾಗುವುದೂ ಬೇಡ, ಕುಮಾರಸ್ವಾಮಿ ಸಾಮಂತನಾಗುವುದೂ ಬೇಡ!
-ಎನ್. ನರಹರಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT