ADVERTISEMENT

ವಯೋಮಿತಿ ಸಡಿಲಿಸಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2017, 19:30 IST
Last Updated 13 ಮಾರ್ಚ್ 2017, 19:30 IST

ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಉಪನಿರೀಕ್ಷಕ ಹಾಗೂ ರಕ್ಷಕ ಹುದ್ದೆಗಳ ಭರ್ತಿಗೆ ಫೆ. 28ರಂದು ಅಧಿಸೂಚನೆ ಹೊರಡಿಸಲಾಗಿದೆ. ಇದಕ್ಕೆ ವಯೋಮಿತಿಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 26 ವರ್ಷ; ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 31 ವರ್ಷ; ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 29 ವರ್ಷ ಎಂದು ನಿಗದಿಪಡಿಸಲಾಗಿದೆ.

ಇದರಿಂದಾಗಿ  ಹಿಂದುಳಿದ ವರ್ಗದ ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೂ ವಯೋಮಿತಿಯನ್ನು 31 ವರ್ಷಗಳಿಗೆ ಏರಿಸಬೇಕು.  ರಾಜ್ಯ ಸರ್ಕಾರ ಕಳೆದ ವರ್ಷ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಪರಿಶಿಷ್ಟ ಜಾತಿ–ಪಂಗಡ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಮಾನವಾಗಿ ವಯೋಮಿತಿ ಸಡಿಲಿಕೆ ಮಾಡಿತ್ತು. 

ಈ ಹುದ್ದೆಗಳಿಗೂ ಅದೇ ಸೂತ್ರ ಅನ್ವಯಿಸಲಿ. ವಯೋಮಿತಿ ಸಡಿಲಿಕೆಯಿಂದ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹುದ್ದೆ ದೊರೆಯುವುದಿಲ್ಲ. ಆದರೆ ಪರೀಕ್ಷೆ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ದೊರೆತಂತಾಗುತ್ತದೆ.
–.ಟಿ. ನಾಗರಾಜ್, ಅಣಜಿ, ದಾವಣಗರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.