ADVERTISEMENT

ಸಾರ್ಥಕವಾಗಲಿ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2017, 19:30 IST
Last Updated 13 ನವೆಂಬರ್ 2017, 19:30 IST

ಕಳೆದ ಕೆಲವು ವರ್ಷಗಳಿಂದ ಬೆಳಗಾವಿಯಲ್ಲೂ ವಿಧಾನಸಭೆಯ ಅಧಿವೇಶನ ನಡೆಸಲಾಗುತ್ತಿದ್ದು, ಇದಕ್ಕೆ ವಿಶೇಷ ಮಹತ್ವ ಮತ್ತು ಪ್ರಚಾರ ನೀಡಲಾಗುತ್ತಿದೆ. ಆದರೆ ಈ ಅಧಿವೇಶನಗಳಿಂದ ಉತ್ತರ ಕರ್ನಾಟಕಕ್ಕೆ ಲಾಭವೇನೂ ಆದಂತೆ ಕಾಣಿಸುತ್ತಿಲ್ಲ. ಕಾಟಾಚಾರಕ್ಕೆಂಬಂತೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ ಸಮಯ ಮತ್ತು ಹಣ ಎರಡನ್ನೂ ವ್ಯರ್ಥಮಾಡುವುದನ್ನು ನೋಡಿದರೆ ಬೇಸರವಾಗುತ್ತದೆ.

ಉತ್ತರ ಕರ್ನಾಟಕದ ಜನರ ಬಹುಕಾಲದ ಬೇಡಿಕೆ ಕಳಸಾ– ಬಂಡೂರಿ (ಮಹದಾಯಿ)ಯೋಜನೆ ನನೆಗುದಿಗೆ ಬಿದ್ದಿದೆ. ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ನಿಷ್ಕ್ರಿಯಗೊಂಡಿವೆ. ಮಳೆ ಇಲ್ಲದೆ ರೈತರು- ಜನರು ಬೆಂದುಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ದೊಡ್ಡ ಉದ್ದಿಮೆಗಳು ಇಲ್ಲದೆ, ಶಿಕ್ಷಣ ಮುಗಿಸಿದ ಯುವಕರು ಉದ್ಯೋಗ ಅರಸಿಕೊಂಡು ಬೇರೆ ಜಿಲ್ಲೆ ಅಥವಾ ರಾಜ್ಯಗಳಿಗೆ ಹೋಗಬೇಕಾದ ಪರಿಸ್ಥಿತಿ ಇದೆ... ಹೀಗೆ ಪಟ್ಟಿಮಾಡುತ್ತ ಹೋದರೆ ನುರಾರು ಸಮಸ್ಯೆಗಳಿವೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವುದರಿಂದ ಸಮಸ್ಯೆಗಳಿ ಪರಿಹಾರ ಲಭಿಸುವುದಿಲ್ಲ, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಈ ಭಾಗದ ಅಭಿವೃದ್ಧಿಗೆ ಕೆಲವು ಯೋಜನೆಗಳನ್ನು ರೂಪಿಸಿ ಜಾರಿಮಾಡಿದಾಗ ಈ ಭಾಗ ಅಭಿವೃದ್ಧಿಹೊಂದಿ, ಸುವರ್ಣಸೌಧ ಕಟ್ಟಿಸಿದ್ದು ಸಾರ್ಥಕವಾಗುತ್ತದೆ.

ADVERTISEMENT

-ಮಹಾಂತೇಶ ರಾಜಗೋಳಿ, ಬೈಲಹೊಂಗಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.