ADVERTISEMENT

ಸಿರಿಧಾನ್ಯ- ಸಲಹೆ

ಡಾ.ಕಿರಣಕುಮಾರ್ ಟಿ.ಪಿ., ಬೆಂಗಳೂರು
Published 20 ಮಾರ್ಚ್ 2018, 19:30 IST
Last Updated 20 ಮಾರ್ಚ್ 2018, 19:30 IST

ಸಿರಿಧಾನ್ಯಗಳನ್ನು ಬೆಳೆದ ರೈತರು ತಮ್ಮ ಉತ್ಪನ್ನಗಳಿಗೆ ಬೆಂಬಲ ಬೆಲೆ ಇಲ್ಲದೆ, ಅವುಗಳ ಮಾರಾಟದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಸಿರಿಧಾನ್ಯಗಳಿಗೆ ಬೆಂಬಲ ಬೆಲೆ ಕೊಟ್ಟು, ಸರ್ಕಾರವೇ ಅವನ್ನು ರೈತರಿಂದ ಖರೀದಿಸಬೇಕು.

ಅಂಗನವಾಡಿ, ಮಕ್ಕಳ ಬಿಸಿಯೂಟ, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳು, ಜೈಲು, ಭಿಕ್ಷುಕರ ಪುನರ್ವಸತಿ ಕೇಂದ್ರ, ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿರಿಧಾನ್ಯ ಊಟ ಒದಗಿಸುವುದರಿಂದ ರೈತರಿಗೆ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ಕೊಟ್ಟಂತಾಗುತ್ತದೆ. ಜೊತೆಗೆ ಮಕ್ಕಳಿಗೆ ಮತ್ತು ಬಡವರಿಗೆ ಪೌಷ್ಟಿಕ ಆಹಾರ ಒದಗಿಸಿದಂತಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT