ADVERTISEMENT

ಸೇರ್ಪಡೆ ಸರಿಯಲ್ಲ

​ಪ್ರಜಾವಾಣಿ ವಾರ್ತೆ
Published 19 ಮೇ 2017, 19:30 IST
Last Updated 19 ಮೇ 2017, 19:30 IST

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಈಚೆಗೆ ಹಲವು ಜಾತಿಗಳನ್ನು ಸೇರಿಸಲಾಗುತ್ತಿದೆ. ಆದರೆ ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆಯಾಗುತ್ತಿಲ್ಲ.

ಇದೀಗ ಬಾಂಗ್ಲಾದೇಶದಿಂದ ವಲಸೆ ಬಂದು, ಹಲವು ವರ್ಷಗಳಿಂದ ರಾಯಚೂರಿನಲ್ಲಿ ನೆಲೆಸಿರುವ ಜನರನ್ನೂ ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಇದು ಸರಿಯಲ್ಲ.

ಹೀಗೆ ಅನೇಕ ಜಾತಿಗಳನ್ನು ಈ ವರ್ಗಕ್ಕೆ ಸೇರಿಸುತ್ತ ಹೋದರೆ ಪರಿಶಿಷ್ಟ  ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಇನ್ನಷ್ಟು ಜಾತಿಗಳನ್ನು ಈ ಪಟ್ಟಿಗೆ ಸೇರಿಸುವುದಾದರೆ ಮೀಸಲಾತಿ ಪ್ರಮಾಣವನ್ನೂ ಹೆಚ್ಚಿಸಲಿ.
-ಸುದರ್ಶನ ಬಾಳನಾಯ್ಕ, ಚಿಕ್ಕೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT