ADVERTISEMENT

ಹಿಂದಿರುಗಿಸುವರೆ?

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 27 ನವೆಂಬರ್ 2015, 19:30 IST
Last Updated 27 ನವೆಂಬರ್ 2015, 19:30 IST

ಸಾಹಿತಿಗಳು ಕಲಬುರ್ಗಿ ಅವರ ಹತ್ಯೆಯನ್ನು ಖಂಡಿಸಿ ಸಂಘ-ಸಂಸ್ಥೆಗಳು ನೀಡಿದ ಪ್ರಶಸ್ತಿಗಳನ್ನು ವಾಪಸ್‌ ನೀಡುತ್ತಿರುವುದು ಸ್ವಾಗತಾರ್ಹ. ಆದರೆ ವಿಶ್ವದಲ್ಲಿ ಜೀವಿಸುತ್ತಿರುವವರಿಗೆಲ್ಲ ಅನ್ನ ಬೆಳೆದುಕೊಡುವ ರೈತನಿಗೆ ಬೆನ್ನೆಲುಬಾಗಿ ನಿಲ್ಲುವವರು ಯಾರು?

21ನೇ ಶತಮಾನದಲ್ಲಿ, ಅದರಲ್ಲೂ ಇತ್ತೀಚೆಗಿನ ವರ್ಷಗಳಲ್ಲಿ ರೈತರ ಆತ್ಮಹತ್ಯೆಯು ಹೆಚ್ಚಾಗುತ್ತಿದೆ. ಇದು ಸಮಾಜಕ್ಕೆ ಬಹುದೊಡ್ಡ ಸವಾಲಾಗಿದೆ. ಸಾಹಿತಿಗಳಿಗೂ ಅನ್ನ ನೀಡುವವರು ರೈತರೆ. ಸಾಹಿತಿಗಳು ರೈತರನ್ನು ಕಥಾವಸ್ತುವನ್ನಾಗಿ ಬಳಸಿಕೊಂಡು ಕಥೆ, ಕವನ, ಕಾದಂಬರಿ ಬರೆಯುತ್ತಾರೆ. ಆದರೆ ರೈತರ ಆತ್ಮಹತ್ಯೆಯನ್ನು ನಿಲ್ಲಿಸುವಂತೆ ಸರ್ಕಾರಗಳ ಮೇಲೆ ಒತ್ತಡ ತರುವ ಸಲುವಾಗಿ ಅವರು ಪ್ರಶಸ್ತಿಯನ್ನು ವಾಪಸ್‌ ಮಾಡುವರೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.