ADVERTISEMENT

ಜಾಹೀರಾತು ಬೇಡ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2018, 19:30 IST
Last Updated 18 ಫೆಬ್ರುವರಿ 2018, 19:30 IST

ಸರ್ಕಾರಿ ಶಾಲೆಗಳ ಕಾಂಪೌಂಡ್ ಮೇಲೆ ಖಾಸಗಿ ಸಂಸ್ಥೆಗಳ ಜಾಹೀರಾತು ಹಾಕಲು ಅವಕಾಶ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಪ್ರಸಕ್ತ, ಬಹುತೇಕ ಶಾಲೆಗಳ ಕಾಂಪೌಂಡ್ ಮೇಲೆ ದೇಶದ ನಾಯಕರು, ಕವಿಗಳು, ರಾಜ್ಯ– ರಾಷ್ಟ್ರದ ನಕ್ಷೆಗಳು, ಪ್ರಾಣಿ ಪಕ್ಷಿಗಳ ಚಿತ್ರಗಳನ್ನು ಬಿಡಿಸಲಾಗಿದ್ದು, ಅವು ಮಕ್ಕಳ ಕಲಿಕೆಗೆ ಪೂರಕವಾಗಿವೆ. ಈ ಜಾಗದಲ್ಲಿ ಜಾಹೀರಾತು ಪ್ರಕಟಿಸಲು ಅವಕಾಶ ನೀಡಿದಲ್ಲಿ ಕಲಿಕೆಯ ಉದ್ದೇಶವನ್ನೇ ಮಾರಾಟ ಮಾಡಿದಂತಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಶಾಲಾ ಕಾಂಪೌಂಡ್ ಮೇಲೆ ಜಾಹೀರಾತು ಪ್ರಕಟಿಸಲು ಅನುಮತಿ ನೀಡಬಾರದು.

ಈ. ಬಸವರಾಜು, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.