ADVERTISEMENT

ಅಧಿಕಾರದಿಂದ ಕೆಳಗಿಳಿಯಲಿರುವ ಎಂಸಿಎ ಅಧ್ಯಕ್ಷ ಶರದ್‌ ಪವಾರ್‌

​ಪ್ರಜಾವಾಣಿ ವಾರ್ತೆ
Published 24 ಜುಲೈ 2016, 19:30 IST
Last Updated 24 ಜುಲೈ 2016, 19:30 IST

ಮುಂಬೈ (ಪಿಟಿಐ): ಲೋಧಾ ನೇತೃತ್ವದ ಸಮಿತಿ ಮಾಡಿದ್ದ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿರುವ ಕಾರಣ ಮುಂಬೈ ಕ್ರಿಕೆಟ್‌ ಸಂಸ್ಥೆ (ಎಂಸಿಎ) ಅಧ್ಯಕ್ಷ ಶರದ್‌ ಪವಾರ್ ಅವರು ಮುಂದಿನ ಆರು ತಿಂಗಳ ಒಳಗೆ ಅಧಿಕಾರ ಬಿಡುವುದಾಗಿ ಹೇಳಿದ್ದಾರೆ.
ಭಾನುವಾರ ಇಲ್ಲಿ ನಡೆದ ಎಂಸಿಎ ಆಡಳಿತ ಮಂಡಳಿಯ ಸಭೆಯ ಬಳಿಕ ಅವರು ಈ ತೀರ್ಮಾನ ಪ್ರಕಟಿಸಿದರು.

70 ವರ್ಷ ಮೇಲ್ಪಟ್ಟವರು ಕ್ರಿಕೆಟ್‌ ಆಡಳಿತದಲ್ಲಿ ಇರಬಾರದು ಎಂದು ಸುಪ್ರೀಂ ಕೋರ್ಟ್‌ ಬಿಸಿಸಿಐಗೆ ತಾಕೀತು ಮಾಡಿದೆ. ಆದ್ದರಿಂದ 75 ವರ್ಷದ ಪವಾರ್‌ ಅವರು ಕ್ರಿಕೆಟ್‌ ಆಡಳಿತದಿಂದ ದೂರ ಸರಿಯುವ ನಿರ್ಧಾರ ಕೈಗೊಂಡಿ ದ್ದಾರೆ. ಪವಾರ್ ಅವರು ಹಿಂದೆ ಐಸಿಸಿ ಮತ್ತು ಬಿಸಿಸಿಐಗೆ ಅಧ್ಯಕ್ಷರಾಗಿದ್ದರು.

‘ದೇಶದ ನ್ಯಾಯಾಲಯದ ಬಗ್ಗೆ ಗೌರವವಿದೆ. ಸುಪ್ರೀಂಕೋರ್ಟ್‌ನ ಸೂಚ ನೆಯನ್ನು ಎಂಸಿಎಯಲ್ಲಿ ಅಳವಡಿಸಿ ಕೊಳ್ಳುತ್ತೇವೆ. ಜತೆಗೆ ಸಂತೋಷ ದಿಂದಲೇ ಕ್ರಿಕೆಟ್‌ ಆಡಳಿತಕ್ಕೆ ವಿದಾಯ ಹೇಳುತ್ತೇನೆ. ನಾನು ಅಧಿಕಾರದಲ್ಲಿದ್ದ ಅವಧಿಯಲ್ಲಿ ಕ್ರಿಕೆಟ್‌ ಬೆಳವಣಿಗೆಗೆ ಸಾಧ್ಯವಾದಷ್ಟು ಶ್ರಮಿಸಿದ್ದೇನೆ’ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

‘ಲೋಧಾ ಸಮಿತಿಯ ಶಿಫಾರಸುಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದೆವು. ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಅವಿರೋಧವಾಗಿ ತೀರ್ಮಾನಿಸಲಾಗಿದೆ. ನಮಗಿರುವ ಆರು ತಿಂಗಳುಗಳ ಸಮಯದ ಒಳಗೆ ಎಲ್ಲಾ ಕಾರ್ಯಗಳನ್ನು ಮುಗಿಸುತ್ತೇವೆ.

ಒಂದು ರಾಜ್ಯ ಕ್ರಿಕೆಟ್‌ ಸಂಸ್ಥೆಯಿಂದ ಒಬ್ಬರಿಗಷ್ಟೇ ಮತದಾನದ ಹಕ್ಕು ಇರಬೇಕೆಂದು ಸಮಿತಿ ಹೇಳಿದೆ. ನಮ್ಮ ರಾಜ್ಯದಲ್ಲಿ ಮೂರು ಕ್ರಿಕೆಟ್‌ ಸಂಸ್ಥೆಗಳಿವೆ. ಯಾರಿಗೆ ಮತದಾನದ ಹಕ್ಕು  ಎನ್ನುವುದರ ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ’ ಎಂದೂ ಪವಾರ್‌ ನುಡಿದರು.

ಪವಾರ್‌ ಬಿಸಿಸಿಐ ಅಧ್ಯಕ್ಷರಾಗಿ ದ್ದಾಗಆಟಗಾರರಿಗೆ ಮತ್ತು ಅಂಪೈರ್‌ಗಳಿಗೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT