ADVERTISEMENT

ಅಫ್ರಿದಿ ಕೈಬಿಟ್ಟ ಪಾಕ್ ತಂಡ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2016, 19:41 IST
Last Updated 27 ಆಗಸ್ಟ್ 2016, 19:41 IST
ಅಫ್ರಿದಿ ಕೈಬಿಟ್ಟ ಪಾಕ್ ತಂಡ
ಅಫ್ರಿದಿ ಕೈಬಿಟ್ಟ ಪಾಕ್ ತಂಡ   

ಕರಾಚಿ (ಪಿಟಿಐ): ಪಾಕಿಸ್ತಾನ ತಂಡದ ಶಾಹೀದ್ ಅಫ್ರಿದಿ ಅವರನ್ನು ಮ್ಯಾಂಚೆಸ್ಟರ್‌ನಲ್ಲಿ  ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟ್ವೆಂಟಿ–20 ಪಂದ್ಯದಿಂದ ಕೈಬಿಡಲಾಗಿದೆ.

ಪಾಕಿಸ್ತಾನ ತಂಡದ ಮಾಜಿ ನಾಯಕ  ಮತ್ತು ಆಲ್‌ರೌಂಡರ್ ಅಫ್ರಿದಿ ಅವರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ತಿಳಿಸಿದೆ.

‘ಮೊಣಕಾಲು ನೋವಿನಿಂದ ಬಳಲು ತ್ತಿರುವ ಅಫ್ರಿದಿ ಅವರು ಎಂಆರ್‌ಐ ಸ್ಕ್ಯಾನಿಂಗ್‌ಗೆ ಒಳಗಾಗಿದ್ದಾರೆ.  ಅವರಿಗೆ ಚಿಕಿತ್ಸೆ ಮತ್ತು ವಿಶ್ರಾಂತಿಯ ಅಗತ್ಯವಿದೆಯೆಂದು ವೈದ್ಯರು ತಿಳಿಸಿದ್ದಾರೆ’ ಎಂದು ಪಿಸಿಬಿ ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 7ರಂದು ಟ್ವೆಂಟಿ–20 ಪಂದ್ಯ ನಡೆಯಲಿದೆ.  ಕಳೆದ ಏಪ್ರಿಲ್‌ನಲ್ಲಿ ವಿಶ್ವ ಟ್ವೆಂಟಿ–20 ಚಾಂಪಿಯನ್‌ಷಿಪ್‌ನಲ್ಲಿ ಪಾಕಿಸ್ತಾನ  ಸೋತ ನಂತರ ಅವರನ್ನು  ನಾಯಕತ್ವದಿಂದ ಕೆಳಗಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.