ADVERTISEMENT

‘ಆರನೇ ಕ್ರಮಾಂಕ ಉತ್ತಮ’

ಪಿಟಿಐ
Published 22 ನವೆಂಬರ್ 2017, 19:30 IST
Last Updated 22 ನವೆಂಬರ್ 2017, 19:30 IST
ವೃದ್ಧಿಮಾನ್ ಸಹಾ
ವೃದ್ಧಿಮಾನ್ ಸಹಾ   

ನಾಗ್ಪುರ: ಯಾವುದೇ ಪರಿಸ್ಥಿತಿಗೆ ಒಗ್ಗಿಕೊಂಡು ಬ್ಯಾಟಿಂಗ್ ಮಾಡಲು ಆರನೇ ಕ್ರಮಾಂಕ ಅನುಕೂಲಕರ ಎಂದು ಭಾರತ ಟೆಸ್ಟ್ ತಂಡದ ವಿಕೆಟ್ ಕೀಪರ್‌ ವೃದ್ಧಿಮಾನ್ ಸಹಾ ಹೇಳಿದ್ದಾರೆ. ಶ್ರೀಲಂಕಾ ಎದುರಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಏಳನೇ ಕ್ರಮಾಂಕದಲ್ಲಿ ಮತ್ತು ಎರಡನೇ ಇನಿಂಗ್ಸ್‌ನಲ್ಲಿ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು.

ಇದೇ ಕ್ರಮಾಂಕದಲ್ಲಿ ಮುಂದುವರಿಲು ಇಷ್ಟಪಡುತ್ತೀರಾ ಎಂದು ಕೇಳಿದಾಗ ‘ನಾನು ಎಲ್ಲ ಪಂದ್ಯಗಳಲ್ಲೂ ಏಳು ಅಥವಾ ಎಂಟನೇ ಕ್ರಮಾಂಕದಲ್ಲೇ ಬ್ಯಾಟಿಂಗ್ ಮಾಡುತ್ತಿಲ್ಲ. ಆರನೇ ಕ್ರಮಾಂಕದಲ್ಲೂ ಕ್ರೀಸ್‌ಗೆ ಇಳಿದಿದ್ದೇನೆ. ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜ ಅವರೊಂದಿಗೆ ನನ್ನ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗುತ್ತದೆ. ಎದುರಾಳಿ ತಂಡದ ಬೌಲಿಂಗ್ ದಾಳಿಗೆ ತಕ್ಕಂತೆ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬದಲಾವಣೆ ಆಗುತ್ತಿರುತ್ತದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT