ADVERTISEMENT

ಆರ್ಚರಿ: 25ರಂದು ಆಯ್ಕೆ ಟ್ರಯಲ್ಸ್‌

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 19:30 IST
Last Updated 16 ಮಾರ್ಚ್ 2018, 19:30 IST

ಬೆಂಗಳೂರು: ಸೀನಿಯರ್ ರಾಷ್ಟ್ರೀಯ ಆರ್ಚರಿ ಚಾಂಪಿಯನ್‌ಷಿಪ್‌ಗೆ ರಾಜ್ಯ ತಂಡದ ಆಯ್ಕೆ ಟ್ರಯಲ್ಸ್‌ ಇದೇ ಮಾರ್ಚ್‌ 25ರಂದು ನಡೆಯಲಿದೆ.

ಬೆಳಿಗ್ಗೆ 8.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಟ್ರಯಲ್ಸ್ ನಡೆ ಯಲಿದ್ದು ರಾಜ್ಯ ಅಮೆಚೂರ್‌ ಆರ್ಚರಿ ಸಂಸ್ಥೆಯಲ್ಲಿ ನೋಂದಣಿ ಮಾಡಿಕೊಂಡಿರುವ ಸ್ಪರ್ಧಿ ಗಳು ಭಾಗವಹಿಸಬಹುದಾಗಿದೆ.

ಪುಣೆಯಲ್ಲಿ ಏಪ್ರಿಲ್‌ 4ರಿಂದ 13ರವರೆಗೆ ರಿಕರ್ವ್ ಹಾಗೂ ಕಾಂಪೌಂಡ್ ವಿಭಾಗಗಳಲ್ಲಿ ರಾಷ್ಟ್ರೀಯ ಚಾಂಪಿಯನ್‌ಷಿಪ್ ನಡೆಯಲಿದೆ. ಸಂಸ್ಥೆ ಕಾರ್ಯದರ್ಶಿ ಅನಂತರಾಜು (22275656) ಅವರ ಬಳಿ ಹೆಸರು ನೋಂದಾಯಿಸಿಕೊಳ್ಳಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.