ADVERTISEMENT

ಐಪಿಎಲ್‌ ತನಿಖೆಗೆ ರವಿಶಾಸ್ತ್ರಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2014, 19:30 IST
Last Updated 20 ಏಪ್ರಿಲ್ 2014, 19:30 IST

ಮುಂಬೈ (ಪಿಟಿಐ): ಐಪಿಎಲ್‌ ಕಳ್ಳಾಟ ಹಾಗೂ ಬೆಟ್ಟಿಂಗ್‌ ಪ್ರಕರಣದ ತನಿಖೆ ನಡೆಸಲು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯು (ಬಿಸಿಸಿಐ) ಮಾಜಿ ನಾಯಕ ರವಿಶಾಸ್ತ್ರಿ ಸೇರಿದಂತೆ ಮೂವರು ಖ್ಯಾತನಾಮರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿದೆ.

ಬಿಸಿಸಿಐ ರಚಿಸಿರುವ ಈ ತನಿಖಾ ಸಮಿತಿಯಲ್ಲಿರುವ ಇನ್ನಿಬ್ಬರೆಂದರೆ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ನಿರ್ದೇಶಕ ಆರ್‌.ಕೆ.ರಾಘವನ್‌ ಹಾಗೂ ಕಲ್ಕತ್ತ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜೆ.ಎನ್‌.ಪಟೇಲ್‌.

ಪ್ರಕರಣದ ವಿಚಾರಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ನೂತನ ತನಿಖಾ ಸಮಿತಿ ರಚಿಸುವಂತೆ ಬಿಸಿಸಿಐಗೆ

ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಇಲ್ಲಿ ನಡೆದ ಮಂಡಳಿಯ ಕಾರ್ಯಕಾರಿ ಸಮಿತಿ ತುರ್ತು ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ಬಿಸಿಸಿಐ ಹಂಗಾಮಿ ಅಧ್ಯಕ್ಷ ಶಿವಲಾಲ್‌ ಯಾದವ್‌ ವಹಿಸಿದ್ದರು.

ಬಿಸಿಸಿಐ ಕಾರ್ಯದರ್ಶಿ ಸಂಜಯ್‌ ಪಟೇಲ್‌ ಹಾಗೂ ಮಾಜಿ ಅಧ್ಯಕ್ಷ ಶಶಾಂಕ್‌ ಮನೋಹರ್ ನಡುವೆ ಮಾತಿನ ಚಕಮಕಿ ನಡೆಯಿತು. ಸುಪ್ರೀಂಕೋರ್ಟ್‌ ಮಂಗಳವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.