ADVERTISEMENT

ಕೆಎಸ್‌ಪಿಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2016, 19:30 IST
Last Updated 26 ಸೆಪ್ಟೆಂಬರ್ 2016, 19:30 IST
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಎ ಡಿವಿಷನ್‌ ವಾಲಿಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಸೋಮವಾರ ಪೋಸ್ಟಲ್ ತಂಡದ ಕಾರ್ತಿಕ್‌ ಸ್ಮಾಷ್‌ ಮಾಡಿದ ರೀತಿ –ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಎ ಡಿವಿಷನ್‌ ವಾಲಿಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಸೋಮವಾರ ಪೋಸ್ಟಲ್ ತಂಡದ ಕಾರ್ತಿಕ್‌ ಸ್ಮಾಷ್‌ ಮಾಡಿದ ರೀತಿ –ಪ್ರಜಾವಾಣಿ ಚಿತ್ರ   

ಬೆಂಗಳೂರು: ರೋಚಕ ಹೋರಾಟ ಕಂಡುಬಂದ ಪಂದ್ಯದಲ್ಲಿ ಕೆಚ್ಚೆದೆಯ ಆಟ ಆಡಿದ ಕರ್ನಾಟಕ ರಾಜ್ಯ ಪೊಲೀಸ್‌ (ಕೆಎಸ್‌ಪಿ) ತಂಡ ರಾಜ್ಯ ವಾಲಿಬಾಲ್‌ ಸಂಸ್ಥೆ ಮತ್ತು ದೈಹಿಕ ಶಿಕ್ಷಣ ಕ್ರೀಡಾ ಅಕಾಡೆಮಿ ಸಹಯೋಗದ  23ನೇ ರಾಜ್ಯ ‘ಎ’ ಡಿವಿಷನ್‌ ಸೀನಿಯರ್‌ ವಾಲಿಬಾಲ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆದ್ದಿದೆ.

ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾ ಸಂಕೀರ್ಣದ ಅಂಗಳದಲ್ಲಿ ಸೋಮವಾರ ನಡೆದ ಪುರುಷರ ವಿಭಾಗದ ಪಂದ್ಯದಲ್ಲಿ ಕೆಎಸ್‌ಪಿ 25–23, 17–25, 17–25, 25–16, 15–10ರಲ್ಲಿ ಪೋಸ್ಟಲ್‌ ತಂಡವನ್ನು ಮಣಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.