ADVERTISEMENT

ಕೆಎಸ್‌ಸಿಎ ಮಾಜಿ ಅಧ್ಯಕ್ಷ ರಾಮಪ್ರಸಾದ್‌ ನಿಧನ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2015, 19:34 IST
Last Updated 24 ನವೆಂಬರ್ 2015, 19:34 IST

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಕ್ರಿಕೆಟಿಗ ಕೆ.ಎಂ. ರಾಮಪ್ರಸಾದ್‌ (82) ಅವರು ಸೋಮವಾರ ನಿಧನ ಹೊಂದಿದ್ದಾರೆ.

ಬಲಗೈ ಮಧ್ಯಮವೇಗಿಯಾಗಿದ್ದ ರಾಮಪ್ರಸಾದ್‌ 1959ರಿಂದ 1962ರ ಅವಧಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು.
1998ರಲ್ಲಿ ಕೆಎಸ್‌ಸಿಎ  ಅಧ್ಯಕ್ಷರಾಗಿದ್ದರು. ಬಿಸಿಸಿಐ ಉಪಾಧ್ಯಕ್ಷರೂ ಆಗಿ ಕೆಲಸ ಮಾಡಿದ್ದಾರೆ.

ಭಾರತ ತಂಡದ ಮಾಜಿ ನಾಯಕ ಮಹಮ್ಮದ್‌ ಅಜರುದ್ದೀನ್‌ ಮ್ಯಾಚ್‌ ಫಿಕ್ಸಿಂಗ್‌ ಹಗರಣದಲ್ಲಿ ಸಿಕ್ಕಿ ಬಿದ್ದಾಗ ಈ ಕುರಿತು ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಲಾಗಿತ್ತು.

ಆ ಸಮಿತಿಯಲ್ಲಿ ರಾಮಪ್ರಸಾದ್‌ ಕೂಡ ಇದ್ದರು. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಪಾಲ್ಗೊಂಡಿದ್ದ ಭಾರತ ತಂಡಕ್ಕೆ ರಾಮಪ್ರಸಾದ್ ಮ್ಯಾನೇಜರ್‌ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.