ADVERTISEMENT

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಡೇರ್‌ಡೆವಿಲ್ಸ್‌; ಬ್ಯಾಟಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2017, 10:20 IST
Last Updated 17 ಏಪ್ರಿಲ್ 2017, 10:20 IST
ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಡೇರ್‌ಡೆವಿಲ್ಸ್‌; ಬ್ಯಾಟಿಂಗ್‌ ಆಯ್ಕೆ
ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಡೇರ್‌ಡೆವಿಲ್ಸ್‌; ಬ್ಯಾಟಿಂಗ್‌ ಆಯ್ಕೆ   

ನವದೆಹಲಿ: ತವರಿನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಗೆದ್ದು ವಿಶ್ವಾಸದಿಂದ ಬೀಗುತ್ತಿರುವ ಕೋಲ್ಕತ್ತ ನೈಟ್‌ರೈಡರ್ಸ್‌ ತಂಡ ಐಪಿಎಲ್‌ ಹತ್ತನೇ ಆವೃತ್ತಿಯ 17 ನೇ ಪಂದ್ಯದಲ್ಲಿ ಜಯ ಸಾಧಿಸಿ ‘ಹ್ಯಾಟ್ರಿಕ್‌’ ಸಾಧನೆ ಮಾಡುವ ತವಕದಲ್ಲಿದೆ.

ಫಿರೋಜ್‌ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೌತಮ್‌ ಗಂಭೀರ್‌ ಸಾರಥ್ಯದ ನೈಟ್‌ರೈಡರ್ಸ್‌ ತಂಡದ ವಿರುದ್ಧ ಆತಿಥೇಯ ಡೆಲ್ಲಿ ಡೇರ್‌ಡೆವಿಲ್ಸ್‌ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿಗೂ ‘ಹ್ಯಾಟ್ರಿಕ್‌’ ತವಕ: ಡೆಲ್ಲಿ ಡೇರ್‌ಡೆವಿಲ್ಸ್‌ ಕೂಡ ಗೆಲುವಿನ ‘ಹ್ಯಾಟ್ರಿಕ್‌’ ಮೇಲೆ ಕಣ್ಣು ನೆಟ್ಟಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತಿದ್ದ ಜಹೀರ್‌ ಪಡೆ ನಂತರದ ಪಂದ್ಯಗಳಲ್ಲಿ ರೈಸಿಂಗ್‌ ಪುಣೆ ಸೂಪರ್‌ಜೈಂಟ್‌ ಮತ್ತು ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡಗಳ ಸದ್ದಡಗಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.