ADVERTISEMENT

ಕ್ರಿಕೆಟ್‌ ಸರಣಿಗಳ ವೇಳಾಪಟ್ಟಿ ಪ್ರಕಟ

ಪಿಟಿಐ
Published 23 ಏಪ್ರಿಲ್ 2018, 18:44 IST
Last Updated 23 ಏಪ್ರಿಲ್ 2018, 18:44 IST

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ತಂಡವು 2018–19ರ ಋತುವಿನಲ್ಲಿ ಪಾಕಿಸ್ತಾನ ವಿರುದ್ಧ ಮೂರು ಹಾಗೂ ಶ್ರೀಲಂಕಾ ವಿರುದ್ಧ ಎರಡು ಟೆಸ್ಟ್‌ ಪಂದ್ಯಗಳನ್ನು ಆಡಲಿದೆ.

ಹಾಗೆಯೇ, ಪಾಕಿಸ್ತಾನ, ಶ್ರೀಲಂಕಾ ಮತ್ತು ಜಿಂಬಾವ್ವೆ ವಿರುದ್ಧ 13 ಏಕದಿನ ಹಾಗೂ 9 ಟ್ವೆಂಟಿ–20 ಪಂದ್ಯಗಳ ಆತಿಥ್ಯವನ್ನು ದಕ್ಷಿಣ ಆಫ್ರಿಕಾ ವಹಿಸಲಿದೆ ಎಂದು ಕ್ರಿಕೆಟ್‌ ದಕ್ಷಿಣ ಆಫ್ರಿಕಾ ತಿಳಿಸಿದೆ.

ಪಾಕಿಸ್ತಾನ ವಿರುದ್ಧದ ಟೆಸ್ಟ್‌ ಸರಣಿಯು ಡಿಸೆಂಬರ್‌ ಹಾಗೂ ಜನವರಿಯಲ್ಲಿ ನಡೆಯಲಿದೆ. ಡಿಸೆಂಬರ್‌ 26ರಂದು ಮೊದಲ ಟೆಸ್ಟ್‌ ಪಂದ್ಯ ಸೆಂಚೂರಿಯನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.