ADVERTISEMENT

ಗಾಂಧಿ–ಮಂಡೇಲಾ ಕ್ರಿಕೆಟ್‌ ಸರಣಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2015, 19:30 IST
Last Updated 3 ಜೂನ್ 2015, 19:30 IST

ಜೋಹಾನ್ಸ್‌ಬರ್ಗ್‌ (ಪಿಟಿಐ): ಮುಂದಿನ ಎರಡು ವರ್ಷಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಗಾಂಧಿ–ಮಂಡೇಲಾ ಕ್ರಿಕೆಟ್ ಸರಣಿ ಆಯೋಜಿಸಲು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್‌ ಸೌತ್‌ ಆಫ್ರಿಕಾ (ಸಿಎಸ್‌ಎ) ಚಿಂತನೆ ನಡೆಸುತ್ತಿವೆ.

‘ಇಬ್ಬರು ದಿಗ್ಗಜರ ಹೆಸರಿನಲ್ಲಿ ಸರಣಿ ಆಯೋಜಿಸಲು ನಮಗೆ ಅತ್ಯಂತ ಹೆಮ್ಮೆಯೆನಿಸುತ್ತದೆ. ಭಾರತ ಕೂಡಾ ಈ ಬಗ್ಗೆ ಸಕಾರಾತ್ಮಕ ನಿಲುವು ಹೊಂದಿದೆ.ಎರಡೂ ರಾಷ್ಟ್ರಗಳ ನಡುವೆ ಗಾಂಧಿ–ಮಂಡೇಲಾ ಸರಣಿ ಆಯೋಜಿಸಲು ಮಾತುಕತೆ ನಡೆದಿದೆ. ಈ ಬಗ್ಗೆ ಶೀಘ್ರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಸಿಎಸ್ಎ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಹರೂನ್‌ ಲಾರ್ಗಟ್‌ ತಿಳಿಸಿದ್ದಾರೆ.

ಇದೇ ವರ್ಷ ದಕ್ಷಿಣ ಆಫ್ರಿಕಾ ಭಾರತದಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿ ಆಡಲಿದೆ. 2018ರಲ್ಲಿ ಭಾರತ ಹರಿಣಗಳ ನಾಡಿಗೆ ತೆರಳಲಿದೆ.

‘ನಮ್ಮ ತಂಡದವರು ಐಪಿಎಲ್‌ ಸೇರಿದಂತೆ ಇನ್ನಿತರ ಪ್ರಮುಖ ಟೂರ್ನಿಗಳಲ್ಲಿ ಆಡುತ್ತಿದ್ದಾರೆ. ಭಾರತದಲ್ಲಿ ಮುಂದಿನ ವರ್ಷ ಟ್ವೆಂಟಿ–20 ವಿಶ್ವಕಪ್‌ ನಡೆಯಲಿರುವ ಕಾರಣ ಚುಟುಕು ಕ್ರಿಕೆಟ್‌ಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಿಂದಿನ 18 ತಿಂಗಳುಗಳಿಂದ ಹೆಚ್ಚು ಟ್ವೆಂಟಿ–20 ಕ್ರಿಕೆಟ್‌ಗೆ ಪಂದ್ಯಗಳನ್ನು ಆಡಿದ್ದಾರೆ’ ಎಂದೂ ಅವರು ಮಾಹಿತಿ ನೀಡಿದರು. 2016ರ ಮಾರ್ಚ್‌ನಲ್ಲಿ ಚುಟುಕು ಕ್ರಿಕೆಟ್‌ ವಿಶ್ವಕಪ್‌ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT