ADVERTISEMENT

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಸಜ್ಜಾಗಲು ಟಿ–20 ಉತ್ತಮ ವೇದಿಕೆ: ಕೊಹ್ಲಿ

ಪಿಟಿಐ
Published 23 ಜನವರಿ 2017, 17:35 IST
Last Updated 23 ಜನವರಿ 2017, 17:35 IST
ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ   

ಕೋಲ್ಕತ್ತ: ಐದು ತಿಂಗಳು ಕಳೆದರೆ ಮಹತ್ವದ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಆರಂಭವಾಗಲಿದೆ. ಆ ಟೂರ್ನಿಗೆ ಸಜ್ಜಾಗಲು ಬೌಲರ್‌ಗಳ ಅಭ್ಯಾಸಕ್ಕೆ ಇಂಗ್ಲೆಂಡ್‌ ವಿರುದ್ಧದ ಟಿ–20 ಸರಣಿ ಉತ್ತಮ ವೇದಿಕೆಯಾಗಲಿದೆ ಎಂದು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯುವ ಇಂಗ್ಲೆಂಡ್‌ ಎದುರಿನ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ 5ರನ್‌ ಅಂತರದಲ್ಲಿ ಮಣಿದ ಕಾರಣ ‘ಕ್ಲೀನ್‌ ಸ್ವೀಪ್‌’ ಮಾಡುವ ಗುರಿಯನ್ನು ಕೈಚೆಲ್ಲಿಕೊಂಡಿತ್ತು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೊಹ್ಲಿ ‘ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಜೂನ್‌ ಮೊದಲ ವಾರ ಆರಂಭವಾಗಲಿದ್ದು, ಭಾರತ–ಇಂಗ್ಲೆಂಡ್‌ ತಂಡಗಳು ಮತ್ತೆ ಮುಖ–ಮುಖಿಯಾಗಲಿವೆ. ಟಿ–20 ಪಂದ್ಯಗಳಲ್ಲಿ ಆಡುವ ಬೌಲರ್‌ಗಳಿಗೆ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಪಂದ್ಯಗಳಲ್ಲಿ ಡೆತ್‌ ಓವರ್‌ಗಳಲ್ಲಿ ಹೆಚ್ಚು ರನ್‌ ಬಿಟ್ಟುಕೊಡದೇ ನಿಯಂತ್ರಣ ಸಾಧಿಸಲು ಅನುಕೂಲವಾಗಲಿದೆ’ ಎಂದು ಹೇಳಿದರು. 

ಜ.26 ರಿಂದ ಇಂಗ್ಲೆಂಡ್‌ ವಿರುದ್ಧ ಮೂರು ಪಂದ್ಯಗಳ ಟಿ–20 ಸರಣಿ ಆರಂಭವಾಗಲಿದೆ.


ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯನ್ನು ಉಲ್ಲೇಖಿಸಿರುವ ಕೊಹ್ಲಿ ಬ್ಯಾಟಿಂಗ್‌ ವಿಭಾಗದಲ್ಲಿ ‘ಪಂದ್ಯದ ಕೆಲ ಸಂಧರ್ಭಗಳಲ್ಲಿ ರನ್‌ ಗಳಿಕೆ ಹೆಚ್ಚಿಸಿಕೊಳ್ಳುವ ಅವಶ್ಯಕತೆಯಿದ್ದು, ಸ್ಪರ್ಧಾತ್ಮಕ ಪರಿಸ್ಥಿತಿಗೆ ತಕ್ಕಂತೆ ಉತ್ತಮ ನಿವರ್ಹಣೆ ತೋರುವ ಅಗತ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಏಕದಿನ ಸರಣಿಯಲ್ಲಿ ಆರಂಭಿಕ ಆಟಗಾರರು ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದರು. ಆದರೂ ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ರಹಾನೆ ಅವರನ್ನು ಬೆಂಬಲಿಸಿರುವ ಕೊಹ್ಲಿ, ಆಟಗಾರರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಮೂಲಕ ಅವರನ್ನು ಮತ್ತೆ ಫಾರ್ಮ್‌ಗೆ ಮರಳಲು ಸಾಧ್ಯವಾಗುತ್ತದೆ ಎಂದು ಆರಂಭಿಕ ಆಟಗಾರರ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದರು.

ರೋಹಿತ್‌ ಶರ್ಮಾ, ಶಿಖರ್‌ ಧವನ್‌ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಶೀಘ್ರವೇ ಫಾರ್ಮ್‌ಗೆ ಮರಳುವ ವಿಶ್ವಾಸವನ್ನು ಕೊಹ್ಲಿ ವ್ಯಕ್ತಪಡಿಸಿದ್ದರು.

2013ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ರೋಹಿತ್‌ ಶರ್ಮಾ, ಶಿಖರ್‌ ಧವನ್‌ ಆರಂಭಿಕ ಆಟಗಾರರಾಗಿ ಆಶ್ಚರ್ಯಕಾರವಾದ ಆಟವನ್ನು ಪ್ರದರ್ಶಿಸಿದ್ದರು. ಅದೇ ಆಟ ಮತ್ತೊಮ್ಮೆ ಮರುಕಳಿಸಲ್ಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.