ADVERTISEMENT

ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2017, 5:10 IST
Last Updated 25 ಮಾರ್ಚ್ 2017, 5:10 IST
ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ
ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ   

ಧರ್ಮಶಾಲಾ: ಬಾರ್ಡರ್‌–ಗಾವಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್‌ ಸಂಸ್ಥೆಯ ಮೈದಾನದಲ್ಲಿ ಶನಿವಾರ ಆರಂಭವಾಗಿದೆ. ಮೊದಲು ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ರಾಂಚಿ ಟೆಸ್ಟ್‌ನಲ್ಲಿ ಫೀಲ್ಡಿಂಗ್‌ ಮಾಡುವ ವೇಳೆ ಬಲಭುಜಕ್ಕೆ ಗಾಯ ಮಾಡಿಕೊಂಡಿದ್ದ ಭಾರತ ಟೆಸ್ಟ್‌ ತಂಡದ ನಾಯಕ ಕೊಹ್ಲಿ ಇನ್ನೂ ಪೂರ್ಣವಾಗಿ ಗುಣಮುಖರಾಗಿಲ್ಲ. ಅವರು ಈ ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲ್ಲಿದ್ದಾರೆ.

ಶಮಿ, ಶ್ರೇಯಸ್‌ಗೆ ಸ್ಥಾನ
ಪಶ್ಚಿಮ ಬಂಗಾಳದ ವೇಗಿ ಮಹಮ್ಮದ್‌ ಶಮಿ ಮತ್ತು ಮುಂಬೈನ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಅವರು ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. 

ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ 11 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 57 ರನ್‌ ಗಳಿಸಿದೆ.

ಆಸ್ಟ್ರೇಲಿಯಾ ಪರ:  ಮ್ಯಾಟ್‌ ರೆನ್‌ಷಾ 01, ಡೇವಿಡ್‌ ವಾರ್ನರ್‌ ಬ್ಯಾಟಿಂಗ್‌ 23 , ಸ್ಟೀವನ್‌ ಸ್ಮಿತ್‌ ಬ್ಯಾಟಿಂಗ್‌ 29 ರನ್‌ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT